ಗದಗ

ಇಂಗ್ಲಿಷ್ ಮೋಹ ಕನ್ನಡ ಶಾಲೆಗೆ ಮಾರಕ: ಹೊರಟ್ಟಿ

Published On :

 ಕನ್ನಡಪ್ರಭ ವಾರ್ತೆ, ಮುಂಡರಗಿ, ನ. 9
ಅತಿಯಾದ ಇಂಗ್ಲಿಷ್ ವ್ಯಾಮೋಹದಿಂದ ಮುಂದೊಂದು ದಿನ ಕನ್ನಡ ಶಾಲೆಗಳು ಬಂದಾಗುವ ಕಾಲ ಬರಬಹುದು ಎಂದು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಹೇಳಿದರು.
ಅವರು ಶುಕ್ರವಾರ ಮುಂಡರಗಿಯ ಜ.ಅ.ವಿ. ಸಮಿತಿಯ ಸಭಾಭವನದಲ್ಲಿ ಮಾಧ್ಯಮಿಕ ಶಾಲಾ ನೌಕರರ ಸಂಘದ ಆಶ್ರಯದಲ್ಲಿ ನಡೆದ ಮುಂಡರಗಿ ತಾಲೂಕು ಶೈಕ್ಷಣಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಇಂಗ್ಲಿಷ ವ್ಯಾಮೋಹದಿಂದ ಕನ್ನಡ ಶಾಲೆಗಳಲ್ಲಿ ಶೇ. 38ರಷ್ಟು ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದ ಕನ್ನಡಕ್ಕೆ ಮತ್ತಷ್ಟು ಕುತ್ತು ಬರುವುದು ಖಂಡಿತ. ಶಿಕ್ಷಕರಾದವರು ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವಲ್ಲಿ ಕಾಳಜಿವಹಿಸಬೇಕು ಎಂದರು.
ಶಾಲಾ ಶಿಕ್ಷಕರ ಸಂಘಟನೆಗಳು ಹೆಚ್ಚು ಬಲಗೊಳ್ಳಬೇಕು. ಸಂಘಟನಾ ಶಕ್ತಿಯಿಂದ ಸಮಸ್ಯೆಗಳು ಆದಷ್ಟು ಬೇಗನೆ ಬಗೆಹರಿಸಲು ಸಾಧ್ಯವಾಗುತ್ತದೆ.
ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಘಟಿತ ಹೋರಾಟವೊಂದೇ ದಾರಿ. ಮಹತ್ವಪೂರ್ಣ ಶಿಕ್ಷಣ ಕ್ಷೇತ್ರವು ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಗೊಂದಲಗಳ ಗೂಡಾಗಿದೆ. ಶೈಕ್ಷಣಿಕ ಕ್ಷೇತ್ರ ದಿನದಿಂದ ದಿನಕ್ಕೆ ಸಮಸ್ಯೆಗಳ ಆಗರವಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಮಾಧ್ಯಮಿಕ ಶಾಲಾ ನೌಕರರ ಸಂಘದಿಂದ ಬಸವರಾಜ ಹೊರಟ್ಟಿ ಅವರನ್ನು ಸನ್ಮಾನಿಸ ಲಾಯಿತು.
ಪಿ.ಎಂ. ಪಾಟೀಲ, ಶಿವಬಸವ ಪ್ರಭು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಬಸವರಾಜ ಧಾರವಾಡ ಮತ್ತು ಎಸ್.ಎಂ. ಕೊಟಗಿ ಮುಂತಾದವರು ಮಾತನಾಡಿದರು. ಅಧ್ಯಕ್ಷತೆಯನ್ನು ಮುಂಡರಗಿ ತಾಲೂಕು ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಬಿ.ಕೆ. ಪಾಟೀಲ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್.ಬಿ. ಇಟಗಿ, ಎಸ್.ಟಿ. ಬ್ಯಾಕೋಡ್, ಎ.ಬಿ. ಹಿರೇಮಠ, ಶಂಕ್ರಪ್ಪ ಬಾರಿಕಾಯಿ, ವಿ.ಎಸ್. ಚವಡಿ, ಎಂ.ಎಸ್. ಕಣವಿಮಠ, ರೋಣದ ಮುಂತಾದವರು ಹಾಜರಿದ್ದರು. ಆರ್.ಎಲ್. ಪಾಟೀಲ ಸ್ವಾಗತಿಸಿದರು. ಸಮನ್ವಯ ಸಮಿತಿ ಸದಸ್ಯ ಪ್ರೊ. ಎಸ್.ಎಂ. ಹೊಸಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಎಸ್.ಇನಾಮತಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.