ಗ್ರಾಮಗಳಲ್ಲಿ ಪ್ರೌಢಶಾಲೆ ಪ್ರಾರಂಭಕ್ಕೆ ಆದ್ಯತೆ
ಕನ್ನಡಪ್ರಭ ವಾರ್ತೆ, ನರೇಗಲ್ಲ, ನ. 9
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗ್ರಾಮೀಣ ಭಾಗದಲ್ಲಿರುವ ಮಕ್ಕಳ ಶಿಕ್ಷಣ ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಪ್ರತಿ ಮಗು ಶಿಕ್ಷಣದಿಂದ ವಂಚಿತವಾಗಬಾರದೆಂಬ ದೃಷ್ಟಿಕೋನದಿಂದ ಹೆಚ್ಚು ಗ್ರಾಮಗಳಲ್ಲಿ ಪ್ರೌಢಶಾಲೆಯನ್ನು ತೆರೆಯುವುದರ ಜತೆಗೆ ಅವಶ್ಯಕ ಸೌಲಭ್ಯ ಒದಗಿಸಿ ಕೊಡುತ್ತಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ರೋಣ ಶಾಸಕ ಜಿ.ಎಸ್.ಪಾಟೀಲ ಹೇಳಿದರು.
ಅವರು ಗುರುವಾರ ಸಮೀಪದ ಹಾಲಕೇರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ರು. 75 ಲಕ್ಷ ಅನುದಾನದಲ್ಲಿ 10 ಹೊಸ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಇಂದು ಶೈಕ್ಷಣಿಕ ಕ್ಷೇತ್ರ ಸಾಕಷ್ಟು ಬದಲಾವಣೆಯಾಗುತ್ತ ಬಂದಿದ್ದು, ಮುಂದಿನ ಕೆಲವು ದಶಕಗಳಲ್ಲಿ ಶಿಕ್ಷಣದಲ್ಲಿ ದೊಡ್ಡ ಕ್ರಾಂತಿಯೇ ಆಗಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ದೇಶದಲ್ಲಿರುವ ಪ್ರತಿಯೊಂದು ಮಗು ಶಿಕ್ಷಣದಿಂದ ವಂಚಿತವಾಗಬಾರದೆಂದು ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯ ನೀಡುತ್ತಿವೆ. ಆದರೆ ಪಾಲಕರಲ್ಲಿ ಇಚ್ಛಾಶಕ್ತಿಯ ಕೊರತೆ ಕಂಡು ಬರುತ್ತಿದ್ದು, ಅದರಿಂದ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳ ಕಲಿಕೆಯಲ್ಲಿ ಅದರಲ್ಲೂ ಮಹಿಳೆಯರ ಕಲಿಕೆಯಲ್ಲಿ ಗಣನೀಯ ಪ್ರಮಾಣದಲ್ಲಿ ಯಶಸ್ಸು ಕಾಣುತ್ತಿಲ್ಲ. ಹೀಗಾಗಿ ಸದೃಢ ಸಮಾಜ ನಿರ್ಮಾಣದ ಕನಸು ಸಾಕಾರ ಗೊಳ್ಳುತ್ತಿಲ್ಲ. ಅದಕ್ಕೆ ಪಾಲಕರು ತಮ್ಮ ಮಕ್ಕಳಿಗೆ ದೂರದ ಪ್ರದೇಶಕ್ಕೆ ಶಿಕ್ಷಣಕ್ಕಾಗಿ ಕಳುಹಿಸಲು ಹಿಂದೇಟು ಹಾಕುತ್ತಿರುವುದನ್ನು ಅರಿತು ಸರ್ಕಾರ ಪ್ರೌಢಶಾಲೆ ಹಾಗೂ ಅವುಗಳ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ ಎಂದರು.
ಸಾನ್ನಿಧ್ಯ ವಹಿಸಿದ್ದ ಅನ್ನದಾನ ಶ್ರೀಗಳು ಮಾತನಾಡಿದರು. ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಐ. ಅಸುಂಡಿ, ಅಧ್ಯಕ್ಷತೆ ವಹಿಸಿದ್ದ ಗ್ರಾಪಂ ಅಧ್ಯಕ್ಷೆ ಯಮನವ್ವ ಪೂಜಾರ, ತಾಪಂ ಸದಸ್ಯ ಅಂದಪ್ಪ ಬಿಚ್ಚೂರ, ಗ್ರಾಪಂ ಉಪಾಧ್ಯಕ್ಷೆ ಅಂದವ್ವ ಕುರಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಚನ್ನಬಸಪ್ಪ ಮುಂದಿನಮನಿ, ಎಸ್.ಡಿ. ಹೊಸಳ್ಳಿ, ಜಿ.ಬಿ. ಹಡಪದ, ಎ.ಕೆ. ಕೂಗಳಿ, ಜಿ.ಬಿ. ಕಟುಪಳ್ಳಿ, ಗಿರೀಶಗೌಡ ಮುಲ್ಕಿಪಾಟೀಲ, ಅಂದಪ್ಪ ಸಣ್ಣಹುಲ್ಲಣ್ಣವರ, ಬಾಳಪ್ಪ ಬುರಡಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

