ಗದಗ

ವಿಜ್ಞಾನ ಎಲ್ಲರಿಗೂ ಅವಶ್ಯ

Published On :

ಲಕ್ಷ್ಮೇಶ್ವರ: ವಿಜ್ಞಾನ ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿದೆ. ಹಿಂದಿನ ದಿನಮಾನಗಳನ್ನು ನೋಡಿದಾಗ ಇಂದು ವಿಜ್ಞಾನ ಅಪಾರವಾಗಿ ಬೆಳೆಯುತ್ತಾ ಬರುತ್ತಿದೆ ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಅಭಿಪ್ರಾಯಪಟ್ಟರು.
ಅವರು ಪಟ್ಟಣದ ಉಮಾವಿದ್ಯಾಲಯದ ಆವರಣದಲ್ಲಿ ಜಿಪಂ ಗದಗ, ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಶಿರಹಟ್ಟಿ ಮತ್ತು ಪಟ್ಟಣದ ಉಮಾವಿದ್ಯಾಲಯ ಪುರಸಭೆಯ ಪ್ರೌಢಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಾಗೂ ವಿಜ್ಞಾನ ಶಿಕ್ಷಕರಿಗಾಗಿ ಏರ್ಪಡಿಸಲಾಗಿದ್ದ ಶಿರಹಟ್ಟಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇಂದು ಅನೇಕ ರಾಷ್ಟ್ರಗಳು ವಿಜ್ಞಾನದಿಂದ ತಮ್ಮ ಶ್ರೇಷ್ಠತೆಯನ್ನು ಹೆಚ್ಚಿಸಿಕೊಂಡಿವೆ. ಸುಧಾರಣೆ, ಬದಲಾವಣೆಯನ್ನು ವಿಜ್ಞಾನದಿಂದ ಕಾಣಬಹುದಾಗಿದೆ. ಬೆಳೆಯುತ್ತಿರುವ ಈ ವಿಜ್ಞಾನ ಇಂದು ಎಲ್ಲರಿಗೂ ಅತಿ ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಹೆಚ್ಚು ವಿಜ್ಞಾನದ ಬಗ್ಗೆ ಆಸಕ್ತಿ ಉಂಟಾಗುವಂತೆ ಮಾಡುವುದು ಅವಶ್ಯವಾಗಿದೆ. ಇತ್ತಿಚೀನ ದಿನಗಳಲ್ಲಿ ಸಮಾಜದಲ್ಲಿ ಪವಾಡ, ಮೂಢನಂಬಿಕೆಗಳನ್ನು ನಂಬುವಂತೆ ಮಾಡುವ ಮೂಲಕ ಜನರನ್ನು ದಾರಿತಪ್ಪಿಸುವ ಕಾರ್ಯವಾಗುತ್ತಿದೆ ಎಂದರು. ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡ್ರ ಮಾತನಾಡಿ, ಸಮಾಜಕ್ಕೆ ಒಳಿತನ್ನು ಮಾಡುವಂತಹ ಸಂಶೋಧನೆಗಳನ್ನು ಮಾಡುವಂತೆ ವಿದ್ಯಾರ್ಥಿಗಳನ್ನು ಹೆಚ್ಚು ಕ್ರಿಯಾಶೀಲಗೊಳಿಸುವುದು ಅಗತ್ಯವಾಗಿದೆ ಎಂದರು.
ಸಭೆಯಲ್ಲಿ ಪುರಸಭೆ ಉಪಾಧ್ಯಕ್ಷ ಎಂ.ಆರ್. ಪಾಟೀಲ, ಗೋಪಾಲದಾಸರ, ತಾಪಂ ಸದಸ್ಯ ಚನ್ನಪ್ಪ ಜಗಲಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಗಂಗಮ್ಮ ಫಕ್ಕೀರಸ್ವಾಮಿಮಠ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಪಂ ಉಪಾಧ್ಯಕ್ಷೆ ಶಾರದಾ ಕವಲೂರ, ಮಲ್ಲೇಶಪ್ಪ ಸಜ್ಜನ, ಹಾಗೂ ಪುರಸಭೆ ಸರ್ವ ಸದಸ್ಯರು, ಕೆ.ಎ. ಬಳಿಗೇರ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಹೆಬ್ಬಾಳದ ಶಿವಯೋಗಿಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ನಡೆದ ಜಲ ಸಹಕಾರ ಎಂಬ ವಿಶೇಷ ವಿಜ್ಞಾನ ನಾಟಕ ಪ್ರದರ್ಶನವು ಜನರ ಮನ ಸೆಳೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.