ಜಲಸಂಪನ್ಮೂಲ ಸಚಿವರ ಪ್ರವಾಸ
ಗದಗ: ರಾಜ್ಯದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ನ. 15ರಂದು ಹಡಗಲಿಯಿಂದ ಆಗಮಿಸಿ ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯವರೆಗೆ ಮುಂಡರಗಿ ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಮಗಾರಿಗಳ ವೀಕ್ಷಣೆ ಮಾಡುವರು. ನಂತರ ಗದಗ ಮೂಲಕ ಸಂಜೆ 7 ಗಂಟೆಗೆ ಹುಬ್ಬಳ್ಳಿಗೆ ಬಂದು ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.
ಆಪ್ತ ಸಮಾಲೋಚಕರ ಆಯ್ಕೆ ಪಟ್ಟಿ
ಗದಗ: ಗದಗ ಜಿಲ್ಲಾಸ್ಪತ್ರೆಯ ಎ.ಆರ್.ಟಿ. ಕೇಂದ್ರಕ್ಕೆ ನೇಮಿಸಲು ಆಪ್ತಸಮಾಲೋಚಕರ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ನ. 19 ರೊಳಗಾಗಿ ಸಲ್ಲಿಸಲು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಕನಿಷ್ಠ ವೇತನ: ಸಲಹೆಗೆ ಆಹ್ವಾನ
ಗದಗ: ದರ್ಜಿ ಉದ್ದಿಮೆ ಕನಿಷ್ಠ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರವು ಉಪಸಮಿತಿ ರಚಿಸಿದೆ. ಇದಕ್ಕೆ ಸಂಬಂಧಿತರು ತಮ್ಮ ಸಲಹೆಗಳನ್ನು ಲಿಖಿತ ರೂಪದಲ್ಲಿ ನ. 15ರ ಒಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ 124, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ ಗದಗ ಇಲ್ಲಿಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಲಾಗಿದೆ.
ಇಂದು ಕುರುಬ ಸಮಾಜ ಸಭೆ
ಶಿರಹಟ್ಟಿ: ನ. 20 ರಂದು ತಾಲೂಕು ಆಡಳಿತದ ವತಿಯಿಂದ ಕನಕದಾಸರ ಜಯಂತಿ ಆಚರಿಸುವ ಕುರಿತು ಚರ್ಚಿಸಲು ನ. 13ರ ಬೆಳಗ್ಗೆ 11 ಗಂಟೆಗೆ ಪಟ್ಟಣದ ಬೀರೇಶ್ವರ ದೇವಸ್ಥಾನದಲ್ಲಿ ತಾಲೂಕು ಹಾಲುಮತ ಕುರುಬ ಸಮಾಜದ ಸಭೆ ಕರೆಯಲಾಗಿದ್ದು, ಸಮಾಜದ ಮುಖಂಡರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ-ಸೂಚನೆ ನೀಡಬೇಕು ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ರಾಮಣ್ಣ ಡಂಬಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

