ಸ್ವಯಂ ಸೇವಕರ ಪಾತ್ರ ಪ್ರಮುಖವಾದುದು: ಜಗದೀಶ ಬ್ಯಾಡಗಿ
ಹೊಳೆಆಲೂರು: ದೇಶದಲ್ಲಿ ಪ್ರತಿಯೊಬ್ಬರೂ ಸಾಕ್ಷರರಾದರೆ ನಮ್ಮ ದೇಶ ಮುಂದುವರಿಯಲು ಸಾಧ್ಯ. ಇಂತಹ ಸಾಕ್ಷರತಾ ಪ್ರಚಾರ ಕಾರ್ಯದಲ್ಲಿ ಸ್ವಯಂ ಸೇವಕರ ಪಾತ್ರ ಮುಖ್ಯ ಎಂದು ಹೊಳೆಆಲೂರು ಗ್ರಾಪಂ ಉಪಾಧ್ಯಕ್ಷ ಜಗದೀಶ ಬ್ಯಾಡಗಿ ಹೇಳಿದರು.
ಅವರು ಭಾನುವಾರ ಸ್ಥಳೀಯ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲಾ ಕೇಂದ್ರದಲ್ಲಿ ಸಾಕ್ಷರ ಭಾರತ-2013ರ ಸ್ವಯಂ ಸೇವಕರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರಲ್ಲಿ ಶಾಂತಿ, ಸಹನೆ, ತಾಳ್ಮೆಯ ಗುಣಗಳಿದ್ದು, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಆಕೆ ಅಕ್ಷರಸ್ಥಳಾದರೆ ಮನೆಯೆಲ್ಲ ಜ್ಞಾನದ ದೀವಿಗೆ ಬೆಳಗಲು ಸಾಧ್ಯ. ಪ್ರತಿಯೊಬ್ಬರಿಗೂ ಕಲಿಯುವ ಹಕ್ಕಿದೆ. ಅನಕ್ಷರತೆಯಿಂದ ಆಗುವ ಹಾನಿ ತಪ್ಪಿಸಲು ಎಲ್ಲರೂ ಸಾಕ್ಷರರಾಗಿ. ಮಹಿಳೆ ಸಬಲೆಯಾಗಲು ಆಕೆ ಅಕ್ಷರಸ್ಥಳಾದರೆ ಮಾತ್ರ ಸಾಧ್ಯ. ಮಹಿಳೆ ಸಾಕ್ಷರರಾಗಲು ಸರ್ಕಾರವು ಹಲವು ಯೋಜನೆಗಳನ್ನು ತಂದಿದ್ದು, ಅದರಲ್ಲೂ ಗ್ರಾಪಂ ವತಿಯಿಂದ ಲಭ್ಯವಿರುವ ಹಲವಾರು ಯೋಜನೆಗಳನ್ನು ಇಲ್ಲಿನ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದರು. ತಾಪಂ ಸದಸ್ಯೆ ತಿಪ್ಪವ್ವ ದೊಡ್ಡಮನಿ, ಗ್ರಾಪಂ ಸದಸ್ಯೆ ಶಾರದಾ ಕಾರಬಾರಿ, ಶೋಭಾ ಚಲವಾದಿ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸದಸ್ಯ ಕಾರ್ಯದರ್ಶಿ ಪಿ.ಎನ್. ಸುಧಾಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಬಿ.ಜಿ. ಜಕ್ಕಣ್ಣವರ, ನಡುವಿನಮನಿ, ಲೋಕಶಿಕ್ಷಣ ಸಮಿತಿ ಸರ್ವಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು. ಪ್ರೇರಕಿ ಗಿರಿಜಾ ಹಿರೇಮಠ ಸ್ವಾಗತಿಸಿದರು. ಸಂಪತಕುಮಾರ ನಿರೂಪಿಸಿದರು. ಮುನ್ನಿ ಮುಲ್ಲಾ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

