ಆರೋಗ್ಯ ಸಹಾಯಕರ ರಾಜ್ಯಮಟ್ಟದ ವಿಚಾರ ಸಂಕಿರಣ ನಾಳೆ
ಗದಗ: ರಾಜ್ಯ ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರ ಕೇಂದ್ರ ಸಂಘದ ಗದಗ ಜಿಲ್ಲಾ ಘಟಕದ ವತಿಯಿಂದ ಆರೋಗ್ಯ ಸಹಾಯಕರ ರಾಜ್ಯಮಟ್ಟದ ವಿಚಾರ ಸಂಕಿರಣ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ನ. 17ರಂದು ಬೆಳಗ್ಗೆ 10.30ಕ್ಕೆ ನಗರದ ಜ. ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಿದ್ದಪ್ಪ ಲಿಂಗದಾಳ ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಆರೋಗ್ಯ ಸೇವಕರ ಕಾರ್ಯಕ್ಷಮತೆ ಹಾಗೂ ಅವರಲ್ಲಿನ ನ್ಯೂನತೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದ್ದು, ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳು ಸಾನ್ನಿಧ್ಯ ವಹಿಸುವರು. ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಕಾರ್ಯಾಗಾರ ಉದ್ಘಾಟಿಸುವರು. ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಸಂಘದ ರಾಜ್ಯ ಉಪಾಧ್ಯಕ್ಷ ಪ್ರೇಮನಾಥ ಗರಗ ಸಾಧಕರಿಗೆ ಮತ್ತು ನಿವೃತ್ತರಿಗೆ ಸನ್ಮಾನಿಸುವರು.
ಸಂಘದ ಜಿಲ್ಲಾಧ್ಯಕ್ಷ ಸಿದ್ದಪ್ಪ ಲಿಂಗದಾಳ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಶಾಸಕ ರಾಮಕೃಷ್ಣ ದೊಡ್ಡಮನಿ, ಜಿ.ಎಸ್. ಪಾಟೀಲ, ಬಿ.ಆರ್. ಯಾವಗಲ್, ಜಿಪಂ ಉಪಾಧ್ಯಕ್ಷ ರಮೇಶ ಮುಂದಿಮನಿ, ಎಸ್.ಎನ್. ದೊಡ್ಡಗೌಡ್ರ, ಡಿಸಿ ಎನ್.ಎಸ್. ಪ್ರಸನ್ನಕುಮಾರ, ಸಿಇಒ ವೀರಣ್ಣ ತುರಮರಿ, ಮುಂತಾದವರು ಉಪಸ್ಥಿತರಿರುವರು.
ಡಾ. ರಾಜೇಂದ್ರ ಗಡಾದ ಆರೋಗ್ಯ ಸಹಾಯಕರ ಸ್ಥಿತಿಗತಿ ಮತ್ತು ಗ್ರಾಮೀಣ ಸೇವೆಯಲ್ಲಿನ ಸಮಸ್ಯೆಗಳ ಕುರಿತ ಉಪನ್ಯಾಸ ನೀಡುವರು ಎಂದು ತಿಳಿಸಿದರು.
ಸಂಘದ ಗೌರವಾಧ್ಯಕ್ಷ ಶ್ರೀಧರ ದೇಸಾಯಿ, ಪ್ರಧಾನ ಕಾರ್ಯದರ್ಶಿ ಪರಮೇಶ್ವರ, ಖಜಾಂಚಿ ಎಂ.ಎಫ್. ಕಲಕಂಬಿ, ಆರ್.ಎಸ್. ಜೋಗಳದಿನ್ನಿ, ಬಿ.ಎಸ್. ಸೋಮಗೊಂಡ, ಅಜಯಕುಮಾಕ ಕಲಾಲ, ಎನ್.ಸಿ. ಜೋಶಿ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

