ಗದಗ

ಗದಗ: ನಾಳೆ ಸ್ವಾಭಿಮಾನಿ ಕನ್ನಡಿಗರ ಸಮಾವೇಶ

Published On :

ಗದಗ: ನಗರದ ರೋಟರಿ ವೃತ್ತದ ಬಳಿಯ ತೋಂಟದಾರ್ಯ ಮಠದ ಬಯಲು ಜಾಗೆಯಲ್ಲಿ ನ. 17ರ ಸಂಜೆ 5 ಗಂಟೆಗೆ  ಕರವೇ ಜಿಲ್ಲಾ ಘಟಕದ ವತಿಯಿಂದ ಗದಗ ಜಿಲ್ಲಾ ಸ್ವಾಭಿಮಾನಿ ಕನ್ನಡಿಗರ ಸಮಾವೇಶ, ಕನ್ನಡ ರಾಜ್ಯೋತ್ಸವ ಹಾಗೂ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಹನುಮಂತ ಅಬ್ಬಿಗೇರಿ ಹೇಳಿದರು.
ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಸುಮಾರು 3 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಹೊಂದಲಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳು ಸಾನ್ನಿಧ್ಯ ವಹಿಸುವರು. ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸುವರು. ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಶಾಸಕ ಜಿ.ಎಸ್. ಪಾಟೀಲ, ರಾಮಕೃಷ್ಣ ದೊಡ್ಡಮನಿ, ಚಲನಚಿತ್ರ ನಟಿ ಹಾಗೂ ನಿರ್ಮಾಪಕಿ ಪ್ರಿಯಾ ಹಾಸನ, ಕಸಾಪ ಜಿಲ್ಲಾಧ್ಯಕ್ಷ ಡಾ. ಶಿವಪ್ಪ ಕುರಿ, ಎಚ್.ಎಸ್.ಸೋಂಪುರ, ಕೆಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಗದಗ ಜಿಪಂನ ಮಾಜಿ ಅಧ್ಯಕ್ಷ ನಿಂಗಪ್ಪ ಕೆಂಗಾರ, ಗದಗ ಎಪಿಎಂಸಿ ಉಪಾಧ್ಯಕ್ಷ ಸಿದ್ದು ಪಾಟೀಲ, ಎಚ್.ಎಸ್. ಶಿವನಗೌಡರ, ಈಶಣ್ಣ ಜಿಡ್ಡಿಬಾಗಿಲ, ರವಿ ದಂಡಿನ, ಪಿ. ಸುಬ್ರಹ್ಮಣ್ಯರಡ್ಡಿ, ಪ್ರಕಾಶ ಬಾಕಳೆ, ವಿಜಯ ಮುಳಗುಂದ, ರಮೇಶ ಬದನೂರ, ಬಸನಗೌಡ ಪೊಲೀಸ್‌ಪಾಟೀಲ, ಕರಬಸಯ್ಯ ಬಸರಿಗಿಡದ, ಹೇಮಾ ಸುತ್ತಕೋಟಿ ಪಾಲ್ಗೊಳ್ಳುವರು. ಹಲವು ಮಹನೀಯರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದ ಪೂರ್ವ ಮಧ್ಯಾಹ್ನ 2.30ಕ್ಕೆ ನಗರದ ರಾಣಿ ಚನ್ನಮ್ಮ ವೃತ್ತದಿಂದ ಕಾರ್ಯಕ್ರಮ ಸ್ಥಳದವರೆಗೆ ತಾಯಿ ಭುವನೇಶ್ವರಿ ಭಾವಚಿತ್ರ ಮೆರವಣಿಗೆ ಜರುಗಲಿದ್ದು, ಜಿಲ್ಲಾಧಿಕಾರಿ ಎನ್.ಎಸ್.ಪ್ರಸನ್ನಕುಮಾರ ಹಾಗೂ ಉಪವಿಭಾಗಾಧಿಕಾರಿ ಐ.ಜಿ. ಗದ್ಯಾಳ ಮೆರವಣಿಗೆಗೆ ಚಾಲನೆ ನೀಡುವರು ಎಂದರು. ಸುದ್ದಿಗೋಷ್ಠಿಯಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಶಿದ್ದು ಅಂದಾನಗೌಡ್ರ, ಮುತ್ತಣ್ಣ ಅನವಾಲದ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಿಂಗನಗೌಡ ಮಾಲಿಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಜಯಕುಮಾರ ಬ್ಯಾಳಿ, ಸಹ ಕಾರ್ಯದರ್ಶಿ ಆನಂದ ಕೊಂಡಿ, ಕಾಸೀಮ್ ಕಿಲ್ಲೇದಾರ, ಮಾರುತಿ ಈಳಗೇರ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.