ಗದಗ

ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಮನವಿ

Published On :

ನರಗುಂದ: ತಾಲೂಕಿನ ಭೈರನಹಟ್ಟಿ ಗ್ರಾಮದ ಕಾಲೇಜು ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಪ್ರತಿ ದಿನ ಬೇರೆ ಬೇರೆ ಗ್ರಾಮಗಳಿಂದ ಭೈರನಹಟ್ಟಿ ಗ್ರಾಮಕ್ಕೆ ಬರುವ ಶಿಕ್ಷಕರಿಗೆ ಸರಿಯಾದ ಬಸ್ ಸೌಕರ್ಯವಿಲ್ಲದೇ ತೊಂದರೆಯಾಗುತ್ತಿದ್ದು, ಈ ಕುರಿತು ಕೂಡಲೇ ಸಮರ್ಪಕ ಬಸ್ ಸೌಕರ್ಯಕ್ಕೆ ಆಗ್ರಹಿಸಿ ಈಚೆಗೆ ನರಗುಂದದ ಬಸ್ ವ್ಯವಸ್ಥಾಪಕ ದೀಪಕ ಜಾಧವ ಅವರಿಗೆ ಮನವಿ ಸಲ್ಲಿಸಲಾಯಿತು.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನೀಡಿದ ಮನವಿ ಸ್ವೀಕರಿಸಿದ ದೀಪಕ ಜಾಧವ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಗಳಿಗೆ ಹೋಗಲು ಸಮಯಕ್ಕೆ ಸರಿಯಾಗಿ ಬಸ್‌ನ ಸೌಕರ್ಯವಿಲ್ಲದಿರುವ ಕುರಿತು ಈಗ ಗಮನಕ್ಕೆ ತರಲಾಗಿದೆ. ಈಗಾಗಲೇ ನರಗುಂದದಿಂದ ಭೈರನಹಟ್ಟಿ ಗ್ರಾಮದ ಮೂಲಕ ಬಿಜಾಪುರ, ಮೀರಜ, ತುಳಜಾಪುರ ಮುಂತಾದ ಪ್ರಮುಖ ನಗರಗಳಿಗೆ ಸಂಚರಿಸುವ ಬಸ್‌ಗಳನ್ನು ಗ್ರಾಮಕ್ಕೆ ನಿಲುಗಡೆಗೆ ಸೂಚಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.