ಗದಗ

ಮಲ್ಲಿಕಾರ್ಜುನಪುರ ಸಮಸ್ಯೆಗೆ ಶೀಘ್ರ ಸ್ಪಂದನೆ

Published On :

ಕನ್ನಡಪ್ರಭ ವಾರ್ತೆ, ಮುಂಡರಗಿ, ನ. 15
ಮಲ್ಲಿಕಾರ್ಜುನಪುರ ಗ್ರಾಮದಲ್ಲಿ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರು ನನ್ನ ಗಮನಕ್ಕೆ ತಂದಿದ್ದು, ತಕ್ಷಣವೇ ಅವರೆಲ್ಲಾ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಗುರುವಾರ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಗ್ರಾಮದಲ್ಲಿ ರು. 5 ಲಕ್ಷ ವೆಚ್ಚದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಭೂಮಿಪೂಜೆಗೆ ಆಗಮಿಸಿದ್ದ ಶಾಸಕರಿಗೆ ಭೂಮಿಪೂಜೆ ಮುನ್ನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಮಲ್ಲಿಕಾರ್ಜುನಪುರದ ಎಲ್.ಡಿ. ಮೇಟಿ, ಬಸಪ್ಪ ಬಡ್ನಿ, ಹನಮಂತಗೌಡ ಪಾಟೀಲ, ತುಂಗಪ್ಪ ದೊಡ್ಡಮನಿ, ಮಲ್ಲಪ್ಪ ಕೆರಳ್ಳಿ, ಫಕ್ಕೀರಗೌಡ ಪಾಟೀಲ, ಶಂಕ್ರಪ್ಪ ಕಳಸದ, ಕೆಂಚನಗೌಡ ನಂದಗಾವಿ, ಮಲ್ಲರಡ್ಡಿ ಬೆಣ್ಣಿಹಳ್ಳಿ, ಬಸನಗೌಡ ಪಾಟೀಲ, ರಾಯಪ್ಪ ಕವಲೂರ, ಗ್ರಾಪಂ ಸದಸ್ಯೆ ನಾಗಮ್ಮ ಬಂಡಿವಡ್ಡರ ಭಾಗವಹಿಸಿದ್ದರು.
ಪ್ರಕಾಶ ಮೇಟಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಿ. ಮೋಹನ್, ಜಿಪಂ ಎಂಜಿನಿಯರಿಂಗ್ ವಿಭಾಗದ ಅಧಿಕಾರಿ ಕೆ.ಬಿ. ಗಂಜಿಹಾಳ, ಬಿಇಒ ಎಂ.ಎ. ರಡ್ಡೇರ, ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ಅನೇಕರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.