ಯೋಜನೆಗಳಿಗೆ ಸಹಕಾರ ನೀಡಿ
ಕನ್ನಡಪ್ರಭ ವಾರ್ತೆ, ಗದಗ, ನ. 15
ಸರ್ಕಾರದ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಜನರು ಸಹಕಾರ ನೀಡಬೇಕೆಂದು ಶಾಸಕ ಬಿ.ಆರ್. ಯಾವಗಲ್ಲ ಹೇಳಿದರು.
ಅವರು ತಾಲೂಕಿನ ಅಡವಿಸೋಮಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ನಿರ್ಮಿಸಿದ ಆಟದ ಮೈದಾನವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶ ಶಾಲೆಗಳ ಸುಧಾರಣೆಗಾಗಿ ಯೋಜನೆಗಳನ್ನು ರೂಪಿಸಲಾಗಿದ್ದು, ಹಂತ ಹಂತವಾಗಿ ಜಾರಿಗೊಳಸಲಾಗುವುದು. ಹಳ್ಳಿಗಳ ಉದ್ದಾರಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ. ಅವುಗಳ ಸದೂಪಯೋಗ ಮಾಡಿಕೊಳ್ಳಬೇಕೆಂದು ಹೇಳಿದರು.
ತಾಪಂ ಸದಸ್ಯ ಪ್ರಹ್ಲಾದ್ ಹೊಸಳ್ಳಿ, ಪ್ರೌಢಶಾಲೆಗೆ ಕೇವಲ ಎರಡು ಕೊಠಡಿಗಳಿದ್ದು, ಕೊಠಡಿಗಳ ಕೊರತೆಯನ್ನು ಗಮನಕ್ಕೆ ತಂದಾಗ ಕೂಡಲೇ ಸ್ಪಂದಿಸಿದ ಶಾಸಕರು ಶೀಘ್ರದಲ್ಲಿ ಕೊಠಡಿಗಳನ್ನು ನೀಡಲಾಗುವುದೆಂದು ಭರವಸೆ ನೀಡಿದರು ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷ ರಮೇಶ ಲಮಾಣಿ, ಉಪಾಧ್ಯಕ್ಷೆ ನಾಗವ್ವ ಹುಡೇದ, ಸದಸ್ಯ ಫಕೀರಪ್ಪ ಜಡಿ, ಮಲ್ಲಪ್ಪ ಹೊಸಳ್ಳಿ, ನಂದೀಶ್ವರಪ್ಪ ಬೆಳ್ಳಿ, ತಿಮ್ಮರಡ್ಡಿ ವಡ್ಡರ, ಮಾಬುಸಾಬ ಹರಿವಾಣ, ಸೀತವ್ವ ರಾಠೋಡ, ಬಿ.ಎಸ್. ಭಜಂತ್ರಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಗ್ರಾಮದ ಗುರುಹಿರಿಯರು, ಶಾಲಾ ಮಕ್ಕಳು, ಕ್ರೀಡಾಭಿಮಾನಿಗಳು, ಶಿಕ್ಷಕರು ಇದ್ದರು. ಪಿಡಿಒ ಅಶ್ವಿನಿ ಕುರಡಗಿ ಸ್ವಾಗತಿಸಿದರು. ತುಕಾರಾಮ ಹುಲಗಣ್ಣವರ ನಿರೂಪಿಸಿದರು. ದೈಹಿಕ ಶಿಕ್ಷಕ ಬಿ.ಎಚ್. ಚಕ್ರಣ್ಣವರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

