ಇಂದು ಸಹ ಪಠ್ಯ ಚಟುವಟಿಕೆ
ಶಿರಹಟ್ಟಿ: 2013-14ನೇ ಸಾಲಿನ ಶಿಕ್ಷಕರ ಕಲ್ಯಾಣ ನಿಧಿಯ ಆಶ್ರಯದಲ್ಲಿ ಶಿಕ್ಷಕರಿಗಾಗಿ ನಡೆವ ಸಹಪಠ್ಯ ಚಟುವಟಿಕೆ ನ. 16ರಂದು ಶಿರಹಟ್ಟಿಯ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಬೆಳಗ್ಗೆ 10 ಕ್ಕೆ ಆಯೋಜಿಸಲಾಗಿದೆ. ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಪ್ರಬಂಧ ಸ್ಪರ್ಧೆ
ಶಿರಹಟ್ಟಿ: ನ. 16ರಂದು ತಾಲೂಕಿನ ಪ್ರೌಢಶಾಲೆ ಮಕ್ಕಳಿಗಾಗಿ ಸಂತ ಕನಕದಾಸರ ಕುರಿತು ಪ್ರಬಂಧ ಹಾಗೂ ಗಾಯನ ಸ್ಪರ್ಧೆಯನ್ನು ಪಟ್ಟಣದ ಕನ್ನಡ ಗಂಡು ಮಕ್ಕಳ ಮಾದರಿ ಶಾಲೆಯಲ್ಲಿ ಏರ್ಪಡಿಸಲಾಗಿದೆ. ಆಸಕ್ತ ಮಕ್ಕಳು ಭಾಗವಹಿಸಿ ಯಶಸ್ವಿಗೊಳಿಸಲು ಕೋರಲಾಗಿದೆ.
ಇಂದು ಕನ್ನಡ ನುಡಿಯಾತ್ರೆ
ನರಗುಂದ: ತಾಲೂಕಿನ ಭೈರಹನಟ್ಟಿ ಗ್ರಾಮದ ಗುರು ಬ್ರಹ್ಮಾನಂದ ಶಿವಾನುಭವ ಧರ್ಮ ಸಂಸ್ಥೆ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ, ದೊರಸ್ವಾಮಿ ವಿರಕ್ತಮಠದ ಸಂಯುಕ್ತ ಆಶ್ರಯದಲ್ಲಿ ನ. 16ರಂದು ಪಟ್ಟಣದ ಸರ್ವಜ್ಞ ಸರ್ಕಲ್ನಿಂದ ತೆರೆದ ವಾಹನದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರ ಮೆರವಣಿಗೆ ಹಾಗೂ ಹುತಾತ್ಮ ರೈತ ವೀರಪ್ಪ ಕಡ್ಲಿಕೊಪ್ಪ ಅವರ ವೀರಗಲ್ಲಿಗೆ ನಮನ, ಕನ್ನಡ ನುಡಿಯಾತ್ರೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪಂಚಗೃಹಗುಡ್ಡದ ಹಿರೇಮಠದ ಸಿದ್ದಲಿಂಗ ಶ್ರೀಗಳು, ವಿರಕ್ತಮಠದ ಚನ್ನಬಸವ ಶ್ರೀಗಳು, ಪತ್ರಿವನ ಮಠದ ಸಿದ್ದವೀರ ಶ್ರೀಗಳು, ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು, ಶಾಸಕ ಬಿ.ಆರ್. ಯಾವಗಲ್, ಸಂಸದ ಪಿ.ಸಿ. ಗದ್ದಿಗೌಡರ, ಮಾಜಿ ಸಚಿವ ಸಿ.ಸಿ. ಪಾಟೀಲ, ಜಿಪಂ ಸದಸ್ಯ ಎಂ.ಎಸ್. ಪಾಟೀಲ, ಶಾಂತಾ ದಂಡಿನ, ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರ, ಉಪಾಧ್ಯಕ್ಷೆ ಗುರುದೇವಿ ಶಾನವಾಡಮಠ, ಎಪಿಎಂಸಿ ಅಧ್ಯಕ್ಷ ಅಜ್ಜಪ್ಪ ಹುಡೇದ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಆರ್.ಎನ್. ಪಾಟೀಲ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಇಂದು ಉಪನ್ಯಾಸ ಕಾರ್ಯಕ್ರಮ
ಗದಗ: ನ. 16ರಂದು ಸಂಜೆ 6ಕ್ಕೆ ತಾಲೂಕು ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶನಿವಾರ ಸಾಹಿತ್ಯ ಸಂಜೆ ಮಾಲಿಕೆ 46 ಕಾರ್ಯಕ್ರಮ ಜರುಗಲಿದೆ. 'ಕರ್ನಾಟಕ ಏಕೀಕರಣಕ್ಕೆ ಗದಗ ಜಿಲ್ಲೆಯ ಕೊಡುಗೆ' ಕುರಿತು ಗದುಗಿನ ಹಿರಿಯ ಸಾಹಿತಿ, ನಗರಸಭೆ ಪದವಿ ಪೂರ್ವ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಕೆ.ಎಚ್. ಬೇಲೂರ ಉಪನ್ಯಾಸ ನೀಡುವರು. ಬೇಟಗೇರಿಯ ಯುವಕವಿ, ಶಿಕ್ಷಕ ವೀರೇಶ ಭೂತಾನವರ ಸ್ವರಚಿತ ಕವನ ವಾಚಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಮ. ಕುರಿ ವಹಿಸುವರು ಎಂದು ಮಲ್ಲೇಶ ಡಿ.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಜುನಾಥ ನೇಮಕ
ಶಿರಹಟ್ಟಿ: ಶಿರಹಟ್ಟಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಇತರೆ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರನ್ನಾಗಿ ಮಂಜುನಾಥ ರಾಮಣ್ಣ ಘಂಟಿ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಸಿ. ವೇಣುಗೋಪಾಲ್ ಆದೇಶ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

