ಸಾಂಕ್ರಾಮಿಕ ರೋಗ ತಡೆಯುವಲ್ಲಿ ವಿಫಲ
ಕನ್ನಡಪ್ರಭ ವಾರ್ತೆ, ನರಗುಂದ, ನ. 15
ತಾಲೂಕಿನ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರ ಗಂಭೀರವಾದ ಆರೋಪ ಮಾಡಿದರು.
ಪಟ್ಟಣದ ತಾಪಂ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಸಾಮಾನ್ಯ ಸಭೆಯಲ್ಲಿ ಆರೋಗ್ಯಧಿಕಾರಿ ಡಾ. ಎಸ್.ಎ. ವಸ್ತ್ರದ ತಮ್ಮ ಇಲಾಖೆಯ ವಿವಿರ ಸಭೆಗೆ ತಿಳಿಸುವ ಸಂದರ್ಭದಲ್ಲಿ ತಾಪಂ ಅಧ್ಯಕ್ಷರು ಆರೋಗ್ಯಾಧಿಕಾರಿಗಳ ಕಾರ್ಯ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದರು.
ನೀರಾವರಿ ವಿಭಾಗ ನಂ. 3ಕ್ಕೆ ಸಂಬಂಧಪಟ್ಟ 14ನೇ ಬ್ಲಾಕ್ ಕಾಲುವೆಗಳ ವ್ಯಾಪ್ತಿಯಲ್ಲಿರುವ ಹದಲಿ, ಗಂಗಾಪುರ ಗ್ರಾಮಗಳ ನೀರಾವರಿ ಜಮೀನುಗಳಿಗೆ ನೀರು ಸಿಗದೇ ಬೆಳೆಗಳು ಒಣಗುತ್ತಿವೆ.
ಈ ಕುರಿತು ನೀರಾವರಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಗಮನ ನೀಡುತ್ತಿಲ್ಲ. ಈ ಕುರಿತು ಕೂಡಲೇ ಅಧಿಕಾರಿಗಳು ಸಮರ್ಪಕ ಉತ್ತರ ನೀಡಬೇಕು ಎಂದು ಸೂಚನೆ ನೀಡಿದರು.
ಗ್ರಾಮೀಣ ಭಾಗದ ಹಲವಾರು ರಸ್ತೆಗಳ ಕಾಮಗಾರಿ ಪ್ರಾರಂಭವಾಗಿದ್ದು, ಅವುಗಳನ್ನು ಗುತ್ತಿಗೆದಾರರು ಕಳಪೆ ಮಟ್ಟದ ಕಾಮಗಾರಿ ಮಾಡುತ್ತಿದ್ದಾರೆಂದು ಸದಸ್ಯ ವಿ.ಎನ್. ಕೊಳ್ಳಿ ಇದಕ್ಕೆ ಉತ್ತರಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ತಾಪಂ ಉಪಾಧ್ಯಕ್ಷ ಗುರುದೇವಿ ಶಾನವಾಡಮಠ, ಸದಸ್ಯ ವಿದ್ಯಾವತಿ ಭೂಮಣ್ಣವರ, ಪಾರವ್ವ ಹಡಗಲಿ, ಗೋವಿಂದರಡ್ಡಿ ಸಿದ್ನಾಳ, ಶಾಂತವ್ವ ಯಲಿಗಾರ, ರುದ್ರವ್ವ ದೊಡಮನಿ, ಹೆಬ್ಬಳ್ಳಿವ್ವ ದೊಡಮನಿ, ತಾಪಂ ಅಧಿಕಾರಿ ನಂದಾಕುಮಾರ ಗುಂಡಾ, ಶಿಕ್ಷಣಾಧಿಕಾರಿ ಸುರೇಶ ಹುಗ್ಗಿ, ಹೆಸ್ಕಾಂ ಅಧಿಕಾರಿ ಸಗೀರಿ, ತೋಟಗಾರಿಕೆ ಅಧಿಕಾರಿ ಪ್ರದೀಪ, ಕೃಷಿ ಅಧಿಕಾರಿ ಕಣವಿ, ಎಲ್ಲಾ ಗ್ರಾಪಂ ಅಧಿಕಾರಿಗಳು ಹಾಗೂ ತಾಪಂ ಸಿಬ್ಬಂದಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

