ಗದಗ

ಇಂದು ಇಂದಿರಾಗಾಂಧಿ ಜನ್ಮ ದಿನಾಚರಣೆ

Published On :

ಗದಗ:  ನ. 19ರ ಬೆಳಗ್ಗೆ 10.30ಕ್ಕೆ ಗದಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಗದಗ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂಧಿರಾಗಾಂಧಿಯವರ ಜನ್ಮದಿನವನ್ನು ಆಚರಿಸಲಾಗುವುದು.  ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಸಂಸದರು, ಶಾಸಕರುಗಳು, ಪಕ್ಷದ ಜಿಲ್ಲಾ ಪಧಾದಿಕಾರಿಗಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಪಂ, ತಾಪಂ, ಗ್ರಾಪಂ, ಎಪಿಎಂಸಿ ಪಕ್ಷದ ಅಧ್ಯಕ್ಷರು ಹಾಗೂ ಸದಸ್ಯರು, ನಗರಸಭೆ, ಪಪಂ, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರ ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ರಾಜೀವಗಾಂಧಿ ಪಂಚಾಯತ ಸಂಘಟನೆ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದಿನಿಂದ ಉಚಿತ ಯೋಗ ಶಿಬಿರ
ಮುಳಗುಂದ:  ಪತಂಜಲಿ ಯೋಗ ಸಮಿತಿ ಮುಳಗುಂದ-ಗದಗ ಹಾಗೂ ಸ್ಥಳೀಯ ಮಾರುತಿ ದೇವಸ್ಥಾನ ಟ್ರಸ್ಟ್ ಕಮಿಟಿ ಮುಳಗುಂದ ಇವರ ಸಂಯುಕ್ತ ಆಶ್ರಯದಲ್ಲಿ ಯೋಗ ಗುರು ಪ್ರಕಾಶ ಮದ್ದಿನ ಗುರೂಜಿ ನಡೆಸಿಕೊಡುವ 6 ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ಶಿಬಿರವು ನ. 19 ರಿಂದ 24ರ ವರೆಗೆ ಪ್ರತಿದಿನ ಬೆಳಗ್ಗೆ 5 ರಿಂದ 7ರ ವರೆಗೆ ಸ್ಥಳೀಯ ಎಸ್.ಜೆ.ಜೆ.ಎಂ. ಹೈಸ್ಕೂಲ್ ಹಿಂದುಗಡೆಯ ಬಸವೇಶ್ವರ ನಗರದಲ್ಲಿ ಜರುಗಲಿದೆ.  ದೇವೇಂದ್ರಪ್ಪ ಗುಳೇದ ಉದ್ಘಾಟಿಸುವರು.  ಸಿದ್ಧಲಿಂಗಯ್ಯ ಗೋನಾಳಮಠ ಅಧ್ಯಕ್ಷತೆ ವಹಿಸುವರು. ರುದ್ರಣ್ಣ ಗುಳಗುಳಿ, ಗದಗ ಪತಂಜಲಿ ಯೋಗ ಸಮಿತಿ ಜಿಲ್ಲಾಧ್ಯಕ್ಷ ಬಿ.ಎಂ. ಹಿರೇಮಠ, ಎಂ.ಬಿ. ಸುಣಗಾರ, ಈರಣ್ಣ ತಡಸದ, ಪ್ರಭು ಬಳಿಗೇರ, ಡಾ. ಬಿ.ಬಿ. ಕುಬಸದ, ಮಹಾಂತಪ್ಪ ಕುತ್ನಿ, ಶಾಂತಮ್ಮ ಮಠದ ಮುಂತಾದವರು ಪಾಲ್ಗೊಳ್ಳುವರು. ನ. 24 ರಂದು ಬೆಳಗ್ಗೆ 6 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.