ಗದಗ

ವಾಲ್ಮೀಕಿ ಮಹರ್ಷಿಗಳ ವಿಚಾರಧಾರೆ ವಿಶ್ವಕ್ಕೆ ಮಾದರಿ: ವೀರಣ್ಣ ಸೊನ್ನದ

Published On :

ಗಜೇಂದ್ರಗಡ: ವಾಲ್ಮೀಕಿ ಮಹರ್ಷಿಗಳ ವಿಚಾರಧಾರೆ ವಿಶ್ವಕ್ಕೆ ಮಾದರಿ. ಅವರ ಕೃತಿ, ತತ್ವಾದರ್ಶಗಳು ಇಂದಿಗೂ ಅಮರ, ಹಿಂದುಳಿದ ಸಮುದಾಯದ ಗೌರವ ಹೆಚ್ಚಿಸಿದ ಕೀರ್ತಿ ವಾಲ್ಮೀಕಿ ಮಹರ್ಷಿಗಳಿಗೆ ಸಲ್ಲುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಸೊನ್ನದ ಹೇಳಿದರು. ಅವರು ಸ್ಥಳೀಯ ಗವಿಮಠದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಗಜೇಂದ್ರಗಡ-ಉಣಚಗೇರಿ ಇವರ ವತಿಯಿಂದ ಭಾನುವಾರ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದರು. ಹಿರೇಮನ್ನಾಪುರದ ಗುರುಕುಲ ಆಶ್ರಮದ ಅಪ್ಪಯ್ಯಜ್ಜನವರು ಸಾನ್ನಿಧ್ಯ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಕವಿತಾ ಜಾಲಿಹಾಳ ಉದ್ಘಾಟಿಸಿ ಮಾತನಾಡಿದರು. ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಶರಣಪ್ಪ ಉಪ್ಪಿನಬೆಟಗೇರಿ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ವಿಪಕ್ಷ ನಾಯಕ ಶಿವರಾಜ ಘೋರ್ಪಡೆ, ಸದಸ್ಯ ಶಿವಪ್ಪ ಸಂಕನೂರ, ಶಾರವ್ವ ತಳವಾರ, ವಿಜಯಲಕ್ಷ್ಮಿ ಚಟ್ಟೇರ, ಚಂಬಣ್ಣ ಚವಡಿ, ಶ್ರೀಕಾಂತ ಅವಧೂತ, ಎನ್.ಎಸ್. ಬಸವಾ, ನಾಗರಾಜ ತಳವಾರ, ಎಸ್.ಎಚ್. ಹಟ್ಟಿಮನಿ, ಮಂಜುನಾಥ ಹೊಸಮನಿ, ಮಂಜುನಾಥ ತಳವಾರ, ಲೊಕೇಶ ತಳವಾರ, ಪ್ರಕಾಶ ತಳವಾರ, ಲಕ್ಷ್ಮೀದೇವಿ ತಳವಾರ, ಸುಧಾ ಪೂಜಾರ, ಎಂ.ಎಚ್. ರಂಗಣ್ಣವರ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಪೂರ್ವದಲ್ಲಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಿಂದ ಕುಂಭಹೊತ್ತ ನೂರಾರು ಮಹಿಳೆಯರು, ಸಮಾಜದ ಗಣ್ಯರು ವಾಲ್ಮೀಕಿ ಮಹರ್ಷಿಗಳ ಭಾವಚಿತ್ರವನ್ನು ಮೆರವಣಿಗೆ ಮೂಲಕ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಂಭ್ರಮಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.