27ರಿಂದ ರಸಪ್ರಶ್ನೆ ಸ್ಪರ್ಧೆ
ಗದಗ: ನವೆಂಬರ್ ತಿಂಗಳಾದ್ಯಂತ ನಡೆಯುವ ನುಡಿಹಬ್ಬ ಕಾರ್ಯಕ್ರಮದ ಅಡಿಯಲ್ಲಿ ಗದಗ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಸಾಹಿತ್ಯ ಹಾಗೂ ನಾಡು, ನುಡಿ, ಸಾಹಿತ್ಯದ ಕುರಿತಾದ ರಸಪ್ರಶ್ನೆಯ ಸ್ಪರ್ಧಾ ಕಾರ್ಯಕ್ರಮವನ್ನು ಗದಗ ತಾಲೂಕಿನ ಪಪೂ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದೆ. ನಗರದ ಜ. ತೋಂಟದಾರ್ಯ ಮಹಾವಿದ್ಯಾಲಯದ ಸಹಯೋಗದಲ್ಲಿ ಕನ್ನಡ ರಸಪ್ರಶ್ನೆ ಸ್ಪಧೆಯನ್ನು ನ. 27ರ ಬೆಳಗ್ಗೆ 10.30 ಕ್ಕೆ ಜರುಗಿಸಲಾಗುವುದು. ಲಿಖಿತ ಹಾಗೂ ಮೌಖಿಕವಾಗಿ ಎರಡು ಹಂತದಲ್ಲಿ ಈ ಸ್ಪರ್ಧೆಯನ್ನು ನಡೆಸಲಾಗುವುದು. ಪ್ರತಿ ಪಪೂ ಮಹಾವಿದ್ಯಾಲಯದಿಂದ ಇಬ್ಬರು ವಿದ್ಯಾರ್ಥಿಗಳ 1 ತಂಡ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಾಚಾರ್ಯರ ಅನುಮತಿ ಪತ್ರದೊಂದಿಗೆ ವಿದ್ಯಾರ್ಥಿಗಳು ಭಾಗವಹಿಸುವುದು ಕಡ್ಡಾಯ. ಕಾಲೇಜಿನ ಪ್ರಾಚಾರ್ಯರು ಭಾಗವಹಿಸುವ ವಿದ್ಯಾರ್ಥಿಗಳ ಹೆಸರನ್ನು ಪ್ರೊ. ಕಿಶೋರಬಾಬು ನಾಗರಕಟ್ಟಿ. ಅಧ್ಯಕ್ಷರು ಗದಗ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು 3 ನೇ ಅಡ್ಡರಸ್ತೆ, ಪಂಚಾಕ್ಷರಿ ನಗರ ಗದಗ-582101 ಇಲ್ಲಿಗೆ ನ. 25 ರೊಳಗಾಗಿ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ರಸಪ್ರಶ್ನೆ ಕಾರ್ಯಕ್ರಮದ ಸಂಯೋಜಕ ಪ್ರೊ. ರಾಜಶೇಖರ ದಾನರೆಡ್ಡಿ (9481125166) ಹಾಗೂ ಕಾರ್ಯದರ್ಶಿ ಶಶಿಕಾಂತ ಕೊರ್ಲಹಳ್ಳಿ (9845956302) ಇಲ್ಲಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

