ಗದಗ

ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ ಬರೆದ 259 ವಿದ್ಯಾರ್ಥಿಗಳು

Published On :

ಮುಂಡರಗಿ: 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಯು ಭಾನುವಾರ ಮುಂಡರಗಿ ಪಟ್ಟಣದಲ್ಲಿರುವ ಎಂ.ಎಸ್. ಡಂಬಳ ಪ್ರೌಢಶಾಲೆಯಲ್ಲಿ ಜರುಗಿತು.
ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ಕೋರಿ ತಾಲೂಕಿನಲ್ಲಿ ಒಟ್ಟು 271 ವಿದ್ಯಾರ್ಥಿ, ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿದ್ದರು. ಅದರಲ್ಲಿ 259 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 12 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಅವರು ಸ್ನಾತಕೋತ್ತರ ಪದವಿ ಪಡೆಯುವವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಶಿಷ್ಯ ವೇತನ ದೊರೆಯಲಿದೆ. ಇದರಿಂದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ 'ಕನ್ನಡಪ್ರಭ'ಕ್ಕೆ ತಿಳಿಸಿದರು.
ಅಲ್ಲದೇ ಭಾನುವಾರ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಮುಂಡರಗಿ ಪಟ್ಟಣದ ಜ.ಅ.ಪ್ರೌಢಶಾಲೆಯಲ್ಲಿ ಜರುಗಿತು. ಈ ಪರೀಕ್ಷೆಗೆ ಒಟ್ಟು 517 ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಹೆಸರನ್ನು ನೋಂದಾಯಿಸಿದ್ದರು. ಅದರಲ್ಲಿ 465 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಿದ್ದು, 52 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ 4 ವರ್ಷಗಳ ಕಾಲ ಪ್ರತಿ ತಿಂಗಳಿಗೆ ರು. 250 ಶಿಷ್ಯವೇತನ ನೀಡಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 4 ವರ್ಷಗಳ ಕಾಲ ಪ್ರತಿವರ್ಷ ಅವರು ಕುಳಿತುಕೊಳ್ಳವ ತರಗತಿಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕು. ಎಸ್‌ಎಸ್‌ಎಲ್‌ಸಿ ಯಲ್ಲಿ ಕನಿಷ್ಟ ಶೇ. 55ರಷ್ಟು ಅಂಕಗಳನ್ನು ಗಳಿಸಬೇಕು. ಅಂದಾಗ ಅವರು ಶಿಷ್ಯವೇತನಕ್ಕೆ ಅರ್ಹರಾಗಿರುತ್ತಾರೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.