ಶೀಲ ಶಂಕಿಸಿ ಪತ್ನಿ ಕೊಲೆಗೈದ ಪತಿರಾಯ
ನರಗುಂದ: ಹೆಂಡತಿಯ ಶೀಲ ಶಂಕಿಸಿ ಗಂಡನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಗ್ಗೆ ಪಟ್ಟಣದ ಜನತಾ ಕಾಲೋನಿಯಲ್ಲಿ ಜರುಗಿದೆ. ಕೊಲೆಯಾದ ಮಹಿಳೆಯನ್ನು ಹನುಮವ್ವ (30) ಎಂದು ಗುರುತಿಸಲಾಗಿದೆ.
ಆರೋಪಿ ರೋಣ ತಾಲೂಕಿನ ಕೌಜಗೇರಿ ಗ್ರಾಮದ ಯಮನಪ್ಪ ಚಿಕ್ಕನಡೆತಯವರ ತಂದೆ ಪಟ್ಟಣದ ನೀರಾವರಿ ಇಲಾಖೆಯಲ್ಲಿ ಸೇವ ಸಲ್ಲಿಸುತ್ತಿದ್ದ, ಇವರ ತಂದೆ ನಿವೃತ್ತಿ ಹೊಂದಿ ನಿಧನರಾದ ನಂತರ ಸ್ವಂತ ಲಾರಿ ಮಾಡಿಕೊಂಡು ನರಗುಂದ ಪಟ್ಟಣದ ಜನತಾ ಕಾಲೋನಿಯಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದನು. ಗದುಗಿನ ಹನುಮವ್ವ ಎಂಬುವಳನ್ನು ಮದುವೆಯಾಗಿದ್ದ. ನಂತರ ದಿನಗಳಲ್ಲಿ ಸಂಶಯದಿಂದ ಹನುಮವ್ವ ಅನೈತಿಕ ಸಂಬಂಧದ ಕುರಿತು ಹಲವು ಬಾರಿ ಹೆಂಡತಿಗೆ ತಿಳುವಳಿಕೆ ಹೇಳಿದರೂ ಕೇಳದೇ ಇದ್ದಾಗ ಹೆಂಡತಿ ಹನುಮವ್ವಳನ್ನು ಮಂಗಳವಾರ ಬೆಳಗ್ಗೆ ಇಬ್ಬರ ನಡುವೆ ಮಾತಿನ ಘರ್ಷಣೆ ಜರುಗಿ, ಯಮನಪ್ಪ ರೊಚ್ಚಿಗೆದ್ದು ಕೊಡಲಿಯಿಂದ ಹನುಮವ್ವಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯ ಸಿಪಿಐ ಎಸ್.ಆರ್. ಪಾಟೀಲ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

