ಕನಕದಾಸರು ನಾಡು ಕಂಡ ಶ್ರೇಷ್ಠ ಸಂತರು: ದೊಡ್ಡಮನಿ
ಶಿರಹಟ್ಟಿ: ಕನಕದಾಸರ ತತ್ವ, ಆದರ್ಶಗಳನ್ನು ಆಚರಣೆಗೆ ತರುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಕಂದಾಯ ಇಲಾಖೆ, ತಾಪಂ, ಸಮಾಜ ಕಲ್ಯಾಣ ಇಲಾಖೆ, ಪಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಕುರುಬರ ಸಂಘದ ಸಂಯುಕ್ತ ಆಶ್ರಯದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜನಮಾನಸಕ್ಕೆ ಸಾಹಿತ್ಯದ ಸವಿ ಉಣಬಡಿಸಿದ ಕನಕದಾಸರು ಈ ನಾಡು ಕಂಡ ಅಪರೂಪದ ಸಂತರು ಎಂದು ಬಣ್ಣಿಸಿದರು.
ಕನಕದಾಸರ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ನಮ್ಮ ನಾಡಿನಲ್ಲಿ ಬಾಳಿ ಹೋದ ದಾರ್ಶನಿಕರಲ್ಲಿ ಕನಕದಾಸರು ಅತ್ಯಂತ ಶ್ರೇಷ್ಠರಾಗಿದ್ದಾರೆ. ತಮ್ಮ ಆಧ್ಯಾತ್ಮಿಕ ತೇಜಸ್ಸಿನಿಂದ ಸಮಾಜಕ್ಕೆ ಚಿರಪರಿಚಿತರಾದ ಕನಕದಾಸರು ದಾಸ ಪರಂಪರೆಯಲ್ಲಿ ಕೀರ್ತನೆಗಳ ಮೂಲಕ ಜನರಿಗೆ ಹತ್ತಿರವಾದರು. ಅವರ ಬದುಕು ನಮಗೆ ಸದಾ ಆದರ್ಶವಾಗಿದೆ ಎಂದು ಹೇಳಿದರು.
ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ ಮಾತನಾಡಿ, ಕನಕದಾಸರು ಮಾನವ ಸಮಾಜಕ್ಕೆ ಬೋಧಿಸಿದ ಸಂದೇಶಗಳು ಸಾರ್ವಕಾಲಿಕ ಎಂದರು.
ಮಹೇಶ ಹಾರೋಗೇರಿ, ಮಂಜುನಾಥ ಕೊಕ್ಕರಗುಂದಿ ಉಪನ್ಯಾಸ ನೀಡಿದರು. ಪಟ್ಟಣದೆಲ್ಲೆಡೆ ಕನಕೋತ್ಸವದ ಸಂಭ್ರಮವಿತ್ತು. ಡೊಳ್ಳು ಮೇಳದೊಂದಿಗೆ ಭಕ್ತಿಯ ಭಂಡಾರ ತೂರಿಬಂತು. ವಾದ್ಯ ಮೇಳಗಳು, ಕನಕನ ಜಯಘೋಷಗಳು, ಭಕ್ತಿ ಭಾವಗಳಿಂದ ಕೂಡಿದ ಜನಸಾಗರ ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿತ್ತು.
ತಾಪಂ ಅಧ್ಯಕ್ಷೆ ಸುನಂದಾ ಬಿದರಳ್ಳಿ ಅಧ್ಯಕ್ಷತೆ ವಹಿಸಿದ್ದರು. ಪಪಂ ಉಪಾಧ್ಯಕ್ಷೆ ಮೀನಾಕ್ಷಿ ತಳವಾರ, ತಹಸೀಲ್ದಾರ್ ಆರ್.ಬಿ. ನಿಂಗನಗೌಡ್ರ, ತಾಪಂ ಸದಸ್ಯ ತಿಮ್ಮರಡ್ಡಿ ಅಳವಂಡಿ, ಕುರುಬ ಸಮಾಜದ ತಾಲೂಕು ಅಧ್ಯಕ್ಷ ರಾಮಣ್ಣ ಡಂಬಳ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈ.ಎಸ್. ಪಾಟೀಲ, ಪಪಂ ಸದಸ್ಯ ಜೆ.ಆರ್. ಕುಲಕರ್ಣಿ, ಬುಡನಶ್ಯಾ ಮಕಾನದಾರ, ಶಿವನಗೌಡ ಪಾಟೀಲ, ಬೀರಪ್ಪ ಸ್ವಾಮಿ, ಪರಸಪ್ಪ ಪೂಜಾರ, ದೇವಪ್ಪ ಬಟ್ಟೂರ, ಬಿಇಒ ಸಮಾಜ ಕಲ್ಯಾಣ ಇಲಾಖೆ, ಪಪಂ, ಅರಣ್ಯ, ಸಿಡಿಪಿಓ ಮತ್ತಿತರ ಇಲಾಖೆ ಅಧಿಕಾರಿಗಳು ಇದ್ದರು. ಮಂಜುನಾಥ ಘಂಟಿ ಸ್ವಾಗತಿಸಿದರು. ಎಂ.ಕೆ. ಲಮಾಣಿ ನಿರೂಪಿಸಿದರು. ಗೂಳಪ್ಪ ಕರಿಗಾರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

