ಗ್ರಾಮೀಣ ಜನತೆ ಸ್ವಚ್ಛತೆಗೆ ಆದ್ಯತೆ ನೀಡಿ
ಶಿರಹಟ್ಟಿ: ಗ್ರಾಮಗಳಲ್ಲಿ ಪ್ರತಿಯೊಬ್ಬರೂ ನೈರ್ಮಲ್ಯದ ಕಡೆ ಹೆಚ್ಚು ಗಮನಹರಿಸಬೇಕೆಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು. ಅವರು ಮಂಗಳವಾರ ತಾಲೂಕಿನ ರಣತೂರ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಪಂ, ತಾಪಂ, ಗ್ರಾಪಂಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ನಿರ್ಮಲ ಭಾರತ ಅಭಿಯಾನದಡಿ ತಾಲೂಕು ಮಟ್ಟದ ಸ್ವಚ್ಛತಾ ಉತ್ಸವ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ ಮಾತನಾಡಿ, ಬಡವ, ಶ್ರೀಮಂತ ಎನ್ನದೇ ಎಲ್ಲ ವರ್ಗದ ಜನರು ಕಡ್ಡಾಯವಾಗಿ ಶೌಚಾಲಯ ಮತ್ತು ಸ್ನಾನಗೃಹ ನಿರ್ಮಿಸಿಕೊಳ್ಳಬೇಕು. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮತ್ತು ಜಾತಿ ಬೆರೆಸದೇ ಗ್ರಾಮಸ್ಥರೇ ಗ್ರಾಮ ಸುಧಾರಣೆಗೆ ನೀಲನಕ್ಷೆ ತಯಾರು ಮಾಡಿ, ಗ್ರಾಪಂಗೆ ನೀಡಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಬೇಕು. ಬಯಲು ಜಾಗದಲ್ಲಿ ಶೌಚಕ್ಕೆ ಹೋಗುವುದು. ಬಚ್ಚಲು ನೀರು ಹರಿದು ಬಿಡುವುದು ತಪ್ಪಬೇಕು ಎಂದರು.
ಗ್ರಾಮಸ್ಥರ ವಿರೋಧ: ಮೊದಲು ಗ್ರಾಮಗಳಲ್ಲಿ ಸಂಚರಿಸಿ, ನಮ್ಮ ಗೋಳು ಅರ್ಥೈಸಿಕೊಳ್ಳಿ. ಬರೀ ಕಾಟಾಚಾರದ ಸಭೆ ನಡೆಸಿ ಭಾಷಣ ಬಿಗಿದು ಹೋಗುವುದು ಬೇಡ. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಯಾವುದೇ ಕಾಮಗಾರಿ ನಡೆಸದೇ ಲಕ್ಷಾಂತರ ಹಣ ದುರ್ಬಳಕೆಯಾಗಿದೆ. ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಪಿಡಿಒ ಮತ್ತು ಜಲಾನಯನ ಅಧಿಕಾರಿ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಸರಿಯಾದ ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡುವುದಿಲ್ಲ. ಯಾವ ಯೋಜನೆಯ ಲಾಭವೂ ನಮಗೆ ದೊರೆತಿಲ್ಲ ಎಂದು ಗ್ರಾಮಸ್ಥರು ಸಭೆ ನಡೆದ ಸ್ಥಳಕ್ಕೆ ಆಗಮಿಸಿ ಶಾಸಕರೆದುರು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಪ್ರತಿಭಟಿಸಿ ವಿರೋಧ ವ್ಯಕ್ತಪಡಿಸಿದ ಘಟನೆ ನಡೆಯಿತು. ತಾಪಂ ಅಧ್ಯಕ್ಷೆ ಸುನಂದಾ ಬಿದರಳ್ಳಿ ಜಿಪಂ ಸದಸ್ಯೆ ಕಮಲಮ್ಮ ಸಜ್ಜನರ, ಗ್ರಾಪಂ ಉಪಾಧ್ಯಕ್ಷೆ ಕಮಲಮ್ಮ ಪೂಜಾರ, ಹುಸೇನಸಾಬ ನಿಲಗುಂದ, ಶೇಖಪ್ಪ ಬಂಡಿವಡ್ಡರ, ಮಂಜುನಾಥಗೌಡ ಗೋಪಾಳಿ, ನಾಗಮ್ಮ ಭಜಂತ್ರಿ, ಚಂದ್ರಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

