ಗದಗ

ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸಿ

Published On :

 ಲಕ್ಷ್ಮೇಶ್ವರ: ಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾಗಿದ್ದು, ಆ ಮನಸ್ಸನ್ನು ಅರಳಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ವಿಚಾರಗಳನ್ನು ಬೆಳೆಸುವ ಕಾರ್ಯವನ್ನು ಶಿಕ್ಷಕರು ಮಾಡಬೇಕು ಎಂದು ಬಳ್ಳಾರಿಯ ಪಾದರ್ ಫ್ರಾನ್ಸಿಸ್ ಅಂಟೋನಿ ಹೇಳಿದರು.  ಅವರು ಪಟ್ಟಣದ ಲಿಟಲ್ ಹಾರ್ಟ್ಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮೀಣ ಮಕ್ಕಳಿಗೆ ಹೆಚ್ಚಿನ ಪ್ರೋತ್ಸಾಹ ಮತ್ತು ಉತ್ತಮ ಶಿಕ್ಷಣ ದೊರೆತರೆ ಉನ್ನತ ಸಾಧನೆ ಮಾಡಬಲ್ಲರು. ಇಂದಿನ ಮಕ್ಕಳಲ್ಲಿ ಸ್ಪರ್ಧಾತ್ಮಕ ಹಾಗೂ ಸೃಜನಾತ್ಮಕ ಮನೋಭಾವ ಬೆಳೆಸುವ ಕಾರ್ಯವನ್ನು ಶಿಕ್ಷಕರು ಮತ್ತು ಪಾಲಕರು ಮಾಡಬೇಕಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಪರುತಪ್ಪ ಶಿರಹಟ್ಟಿ ಮಾತನಾಡಿ, ಶಿಕ್ಷಕರು ಮೊದಲು ಮಕ್ಕಳ ಮನಸ್ಸನ್ನು ಅರಿತು ಬೋಧಿಸುವ ಕಾರ್ಯ ಮಾಡಬೇಕು ಎಂದರು. ಅನಿಲಕುಮಾರ ತೆಗ್ಗಿನಕೇರಿ, ಸಂಸ್ಥೆಯ ನಿರ್ದೇಶಕ ರಾಮೇಶ್ವರ ಶಿರಹಟ್ಟಿ, ಮುಖ್ಯೋಪಾಧ್ಯಾಯ ಗಂಗಾಧರ ಶಿರಹಟ್ಟಿ, ಮೇರಿ ಶೀಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಗೀತಾ ಪೈ, ಪುಷ್ಪಾ ಅಕ್ಕಿ ಹಾಜರಿದ್ದರು. ರಾಣಿ ದಲಾಲ ಸ್ವಾಗತಿಸಿದರು. ಶೋಭಾ ಉಮಚಗಿ ನಿರೂಪಿಸಿದರು. ಅನಿತಾರಾವ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.