ಕುಲ ಕುಲ ಕುಲವೆಂದು ಹೊಡೆದಾಡದಿರಿ: ಶ್ರೀ
ಮುಂಡರಗಿ: ಭಕ್ತ ಕನಕದಾಸರು ಹೇಳಿದಂತೆ ಕುಲ ಕುಲ ಕುಲವೆಂದು ಹೊಡೆದಾಡಿ ಕುಲವನ್ನು ನೋಡುವುದಕ್ಕಿಂತ ಪ್ರತಿಯೊಬ್ಬರೂ ಕುಲದ ನೆಲೆಯನ್ನು ಅರಿತು ನಡೆಯಬೇಕು ಎಂದು ಜ.ನಾಡೋಜ. ಡಾ. ಅನ್ನದಾನೀಶ್ವರ ಮಹಾಸ್ವಾಮಿಗಳು ಹೇಳಿದರು. ಅವರು ಬುಧವಾರ ಸಂಜೆ ಪುರಸಭೆ ಆವರಣದಲ್ಲಿರುವ ಪೊಲೀಸ್ ಪರೇಡ್ ಮೈದಾನದಲ್ಲಿ ತಾಲೂಕು ಆಡಳಿತ ಮುಂಡರಗಿ ಹಾಗೂ ವಿವಿಧ ಸಮುದಾಯಗಳ ಸಂಘಟನೆಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವುಗಳ ಆಶ್ರಯದಲ್ಲಿ ಜರುಗಿದ ಭಕ್ತ ಕನಕದಾಸರ 526ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಸಕ ರಾಮಕೃಷ್ಣ ದೊಡ್ಡಮನಿ ಡೊಳ್ಳು ಭಾರಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಡಾ. ಎಂ.ಬಿ. ಅಂಬಲಿಯವರ, ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ, ತಾಲೂಕು ಹಾಲುಮತ ಸಂಘದ ಅಧ್ಯಕ್ಷ ದೇವಪ್ಪ ಕಂಬಳಿ, ಚಂದ್ರಹಾಸ ಉಳ್ಳಾಗಡ್ಡಿ, ತಾಪಂ ಉಪಾಧ್ಯಕ್ಷೆ ಅಕ್ಕಮಹಾದೇವಿ ಹಾರೋಗೇರಿ, ತಹಸೀಲ್ದಾರ್ ಎಸ್.ಆರ್. ಶಿರಕೋಳ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಿ.ಮೋಹನ, ಬಿಇಒ ಎಂ.ಎ. ರಡ್ಡೇರ, ಮುಖ್ಯಾಧಿಕಾರಿ ಆರ್.ಎಂ. ಪಾಟೀಲ, ರಂಗಪ್ಪ ಕ್ಯಾದಗಿಹಳ್ಳಿ, ಬಿ.ವಿ. ಮುದ್ದಿ, ದೇವಪ್ಪ ಇಟಗಿ, ಗಣೇಶ ಹಾತಲಗೇರಿ, ಡಾ. ಡಿ.ಎಲ್. ಕಲ್ಲಕುಟಗರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ತಾಲೂಕು ಕಾರ್ರ್ಯದರ್ಶಿ ಡಿ.ಡಿ. ಮೋರನಾಳ ಸ್ವಾಗತಿಸಿ, ಎ.ಕೆ. ಮುಲ್ಲಾನವರ ನಿರೂಪಿಸಿದರು. ಬಸವರಾಜ ನವಲಗುಂದ ವಂದಿಸಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

