ಸಾರ್ವಜನಿಕರ ಅಹವಾಲು ಸ್ವೀಕಾರ
ಗದಗ: ಕರ್ನಾಟಕ ಲೋಕಾಯುಕ್ತ ಗದಗ ಘಟಕದ ಆರಕ್ಷಕ ಉಪಾಧೀಕ್ಷಕ ಕೆ.ಸಿ. ಅಸುಂಡಿ ಅವರು ಗದಗ ಜಿಲ್ಲೆಯ ತಾಲೂಕುಗಳಿಗೆ ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ದೂರು ಅರ್ಜಿ, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ನ. 23 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಗದಗ ತಾಪಂ ಸಭಾಭವನದಲ್ಲಿ, ನ. 25 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನರಗುಂದ ಹಳೆ ತಹಸೀಲ್ದಾರ್ ಕಚೇರಿಯಲ್ಲಿ, ನ. 26 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ರೋಣ ತಾಪಂನಲ್ಲಿ, ನ. 27 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಮುಂಡರಗಿ ತಾಪಂ ಸಭಾಭವನದಲ್ಲಿ ಹಾಗೂ 28 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರಗೆ ಶಿರಹಟ್ಟಿಯ ಬೇಂದ್ರೆ ಭವನದಲ್ಲಿ ಅಹವಾಲು ಸ್ವೀಕರಿಸುವರು. ನ್ಯಾಯಾಲಯದ ವಿಚಾರಣೆಯಲ್ಲಿ ಬಾಕಿ ಇರುವ ಹಾಗೂ ಸಿವಿಲ್ ಸ್ವರೂಪದ ದೂರುಗಳನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕ ನೌಕರರು ತಮ್ಮ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ ಹಾಗೂ ನಿರ್ಲಕ್ಷ್ಯತೆ ತೋರಿದಲ್ಲಿ, ಲಂಚ ಕೇಳಿದಲ್ಲಿ ಅವರ ವಿರುದ್ಧ ದೂರು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ತರಬೇತಿಗೆ ಅರ್ಜಿ ಆಹ್ವಾನ
ಗದಗ: 2013ನೇ ಸಾಲಿನ ಎಸ್.ಸಿ.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯವರಿಗೆ 13 ಅಭ್ಯರ್ಥಿಗಳು ಲಘು ಮೋಟಾರು ವಾಹನ ಚಾಲನಾ ತರಬೇತಿ ನೀಡುವ ಯೋಜನೆಯಡಿ 25-8-2013 ರಂದು ನಡೆದ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ತರಬೇತಿಗಾಗಿ ನಿಯೋಜಿಸಿದ್ದು, ಅದರಲ್ಲಿ 7 ಅಭ್ಯರ್ಥಿಗಳು ಹಾಜರಾಗಿದ್ದು ಇನ್ನು 6 ಜನ ಅಭ್ಯರ್ಥಿಗಳು ಹಾಜರಾಗದೇ ಇರುವ ಕಾರಣ ಮತ್ತೊಮ್ಮೆ ಅರ್ಜಿ ಕರೆಯಲಾಗಿದೆ. ಅರ್ಜಿಯನ್ನು ಪ್ರಾದೇಶಿಕ ಸಾರಿಗೆ ಕಚೇರಿಯಿಂದ ನ. 21 ರೊಳಗೆ ಪಡೆದುಕೊಳ್ಳಬೇಕು. ಆಸಕ್ತ ಅಭ್ಯರ್ಥಿಗಳು ಗದಗ ಪ್ರಾದೇಶಿಕ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ನ. 25 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

