ಗದಗ

ಡಿ. 5ಕ್ಕೆ ಸುವರ್ಣ ಸೌಧಕ್ಕೆ ಮುತ್ತಿಗೆ

Published On :

ಗದಗ: ರಾಜ್ಯ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ನ್ಯಾ. ಎ.ಜೆ. ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಡಿ. 5ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಸಮಿತಿ ರಾಜ್ಯಾಧ್ಯಕ್ಷ ಎಚ್. ಹನುಮಂತಪ್ಪ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 8 ವರ್ಷಗಳ ಹಿಂದೆ ಸದಾಶಿವ ಆಯೋಗ ಈ ಕುರಿತು 2012ರಲ್ಲಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಪ.ಜಾತಿ ಮೀಸಲಾತಿ ಸೌಲಭ್ಯದಲ್ಲಿ ಮಾದಿಗರು ಪಡೆಯುತ್ತಿರುವ ಮೀಸಲಾತಿ ತೀರ ಕಡಿಮೆ. ಪರಿಶಿಷ್ಟ ಜಾತಿಯಲ್ಲಿ ಮಾದಿಗರು ಬಹುಸಂಖ್ಯೆಯಲ್ಲಿದ್ದಾರೆ ಎಂದು ಆಯೋಗ ವರದಿ ಸಲ್ಲಿಸಿದೆ. ಕೆಲವು ಬೇರೆ ಜಾತಿ ಜನರು ವರದಿ ವಿರೋಧಿಸಿ ಹೋರಾಟ ನಡೆಸಿದ್ದು, ಇದು ಸ್ವಹಿತಾಸಕ್ತಿ. ರಾಜಕೀಯ ಪ್ರೇರಿತ. ಪ.ಜಾ ಪಟ್ಟಿಯಲ್ಲಿ ಬೋವಿ, ಕೊರಚ, ಲಂಬಾಣಿ ಜನಾಂಗಗಳನ್ನು ಸೇರಿಸುವ ಮೂಲಕ ಮೂಲ ಅಸ್ಪೃಶ್ಯರಿಗೆ ಅನ್ಯಾಯ ಜರುಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿ. 3 ರಿಂದ 5ರ ವರೆಗೆ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಿ, ಡಿ. 5ರಂದು ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ವೇಳೆ 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರೊಂದಿಗೆ ಮುತ್ತಿಗೆ ಹಾಕಿ, ಅಧಿವೇಶನ ಅವಧಿಯಲ್ಲಿ ಈ ವರದಿಯನ್ನು ಅನುಷ್ಠಾನಕ್ಕೆ ಸರ್ಕಾರವನ್ನು ಆಗ್ರಹಿಸಿಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.