ಗದಗ

ಇಂದು ಬೈಕ್ ಸೈಕ್ಲಿಂಗ್

Published On :

ಶಿರಹಟ್ಟಿ:  ತಾಲೂಕಿನ ಯತ್ತಿನಹಳ್ಳಿ ಗ್ರಾಮದ ವೀರ ಸುಭಾಷ ಯುವಕ ಸಂಘ ಮತ್ತು ಜಿಲ್ಲಾ ಅಮೇಚ್ಯೂರ್ ಸೈಕ್ಲಿಂಗ್ ಅಸೋಸಿಯೇಷನ್ ಲಕ್ಷ್ಮೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ಮತ್ತು ಭಾನುವಾರ 9ನೇ ರಾಜ್ಯ ಮಟ್ಟದ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್‌ಶಿಪ್ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರ ಉದ್ಘಾಟನೆ ಬೆಳಗ್ಗೆ 9ಕ್ಕೆ ನಡೆಯಲಿದೆ. ಶಾಸಕ ರಾಮಕೃಷ್ಣ ದೊಡ್ಡಮನಿ ಉದ್ಘಾಟಿಸುವರು.   ಗ್ರಾಪಂ ಅಧ್ಯಕ್ಷ ಬಸವರಾಜ ನೀಲಗುಂದ ಅಧ್ಯಕ್ಷತೆ ವಹಿಸುವರು. ರಾಜ್ಯ ಸೈಕ್ಲಿಂಗ್ ಸಂಸ್ಥೆ ಅಧ್ಯಕ್ಷ ಶ್ರೀಧರ ಎಂ. ಗೋರೆ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡ್ರ, ತಾಪಂ ಸದಸ್ಯ ಎನ್.ಬಿ. ಮಡಿವಾಳರ, ಮಾಜಿ ಶಾಸಕ ಜಿ.ಎಸ್. ಗಡ್ಡದ್ದೇವರಮಠ, ರಾಮಣ್ಣ ಲಮಾಣಿ, ರಾಜ್ಯ ಸೈಕ್ಲಿಂಗ್ ಸಂಸ್ಥೆ ಉಪಾಧ್ಯಕ್ಷ ಜಿ.ವಿ. ಪಾಟೀಲ, ಜಿಲ್ಲಾ ಸೈಕ್ಲಿಂಗ್ ಸಂಸ್ಥೆ ಅಧ್ಯಕ್ಷ ರವಿ ಮರಲಿಂಗಣ್ಣವರ ಗ್ರಾಪಂ ಸದಸ್ಯೆ ಲಕ್ಷ್ಮವ್ವ ಮ್ಯಾಗೇರಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಭಾನುವಾರ 24ರ ಮಧ್ಯಾಹ್ನ 3ಕ್ಕೆ ವಿಪ ಸದಸ್ಯ ನಾಗರಾಜ ಛಬ್ಬಿ ಪಾರಿತೋಷಕ ವಿತರಣೆ ಮಾಡಲಿದ್ದು, ಶಾಸಕ ರಾಮಕೃಷ್ಣ ದೊಡ್ಡಮನಿ, ಟಿ. ಈಶ್ವರ, ಆನಂದಸ್ವಾಮಿ ಗಡ್ಡದ್ದೇವರಮಠ, ಸಿ.ಎಸ್. ಜಗಲಿ, ಕಾರ್ಯದರ್ಶಿ ಎಸ್.ಎಂ. ಕುರಣಿ, ಗ್ರಾ.ಪಂ. ಸದಸ್ಯ ನಾಗನಗೌಡ ಪಾಟೀಲ, ಸಿದ್ದಪ್ಪ ಬೆಟಗೇರಿ, ಆರ್.ಬಿ. ಪಾಟೀಲ, ಡಿ.ಹೆಚ್.ಕೆ. ಗೌಡ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಕಾರ್ಯದರ್ಶಿ ಶೇಖರಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.