ಗದಗ

ವಸತಿ ಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿಗೆ ಮನವಿ

Published On :

ಕನ್ನಡಪ್ರಭ ವಾರ್ತೆ, ಗದಗ, ನ. 23
ಗದಗ-ಬೆಟಗೇರಿ ನಗರದ ಗುಡಿಸಲು, ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ವಸತಿ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಈಚೆಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈಚೆಗೆ ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಹಮ್ಮಿಕೊಂಡಿದ ಸ್ಲಂ ಜನರ ಸಮಾವೇಶಕ್ಕೆ ಆಗಮಿಸಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲರಿಗೆ ಸ್ಲಂ ನಿವಾಸಿಗಳ ಬೇಡಿಕೆಗಳ ಕುರಿತು ಗಮನಕ್ಕೆ ತಂದಾಗ ಸಚಿವರು ಮಾತನಾಡಿ, ನಗರದ ವಸತಿ ರಹಿತರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಹಾಗೂ ಸರ್ಕಾರದ ಆದೇಶದಂತೆ ಗುಡಿಸಲು ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗುವುದು. ಸ್ಲಂ ನಿವಾಸಿಗಳ ಜನಸಂಖ್ಯೆ ಅನುಗುಣವಾಗಿ ಸ್ಲಂ ನಿವಾಸಿಗಳ ಪುನರ್ ವಸತಿಗಾಗಿ ಸೂಕ್ತ ಭೂಮಿಯನ್ನು ಮಂಜೂರು ಮಾಡಿ ವಸತಿ ಕಲ್ಪಿಸಲಾಗುವುದು. ಈ ಕುರಿತು ತಕ್ಷಣ ಕ್ರಮಕೈಗೊಳ್ಳಲು ಕಾರ್ಯಕ್ರಮಕ್ಕೆ ಆಗಮಿಸಿದ ಅಧಿಕಾರಿಗಳಿಗೆ ಆದೇಶ ನೀಡಿದರು.
ಸಚಿವರ ಭರವಸೆಯಂತೆ ತಕ್ಷಣ ವಸತಿ ರಹಿತರಿಗೆ ಮನೆಗಳನ್ನು ಹಂಚಿಕೆ ಮಾಡಬೇಕು. ಸ್ಲಂ ನಿವಾಸಿಗಳ ಜನಸಂಖ್ಯೆ ಅನುಗುಣವಾಗಿ ಭೂಮಿಯನ್ನು ಮೀಸಲಿಡಬೇಕು ಹಾಗೂ ಸರ್ಕಾರದ ಆದೇಶದಂತೆ ನಗರದ ಗುಡಿಸಲು ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲು ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಈ ಕೂಡಲೇ ಆದೇಶ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದೆ.
 ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಮಾತನಾಡಿ, ಈಗಾಗಲೇ ವಸತಿ ರಹಿತರಿಗೆ ಮನೆಗಳನ್ನು ನಿರ್ಮಿಸಿ ಕೊಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಹಂತ ಹಂತವಾಗಿ ಸ್ಲಂ ನಿವಾಸಿಗಳ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದರು.
ಕೊಳಚೆ ಸಮಿತಿ ಅಧ್ಯಕ್ಷ ಅಶೋಕ ಮ್ಯಾಗೇರಿ, ಉಪಾಧ್ಯಕ್ಷ ಅಶೋಕ ಕುಡತಿನ್ನಿ, ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ ಮಾನ್ವಿ, ಮಹಿಳಾ ಸಮಿತಿ ಅಧ್ಯಕ್ಷ ಉಮಾದೇವಿ ಕಾತರಕಿ, ಕಾರ್ಯದರ್ಶಿ ತಿಪ್ಪವ್ವ ಮುಟಗಾರ, ಅಶೋಕ ಕುಸಬಿ, ರಸೂಲಸಾಬ್ ಮುಳಗುಂದ, ದ್ಯಾಮಣ್ಣ ಡೋಣಿ, ಬಸವರಾಜ ಬಿಳೆಯಲಿ, ನವೀನ ಬಣಕಾರ, ಶಾಹಜಾನಬಿ ಕರ್ನಾಚಿ, ನಜಮುನಿಸ್ಸಾ ಮುರಗೋಡ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.