ಮರಾಠಾ ಸಮಾಜ ಕಲ್ಯಾಣಕ್ಕೆ ಆದ್ಯತೆ: ಜಿ.ಎಸ್. ಪಾಟೀಲ್
ಗಜೇಂದ್ರಗಡ: ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಮರಾಠಾ ಸಮುದಾಯದ ಕಲ್ಯಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಸ್ಥಳೀಯ ಶಿವಾಜಿ ಪೇಟೆಯಲ್ಲಿ ಶನಿವಾರ ಸಂಜೆ ನಡೆದ ಮಾರುತೇಶ್ವರ ಕಾರ್ತಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಬಳಿಕ ಮರಾಠ ಸಮಾಜ ಬಾಂಧವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕೇವಲ ಕಟ್ಟಡ ಕಾಯಕ ನಂಬಿ ಬದುಕು ಸಾಗಿಸುತ್ತಿರುವ ಈ ಸಮುದಾಯ ಬಾಂಧವರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಲು ಮುಂದಾಗುವುದು ಅವಶ್ಯ. ಆದ್ಯತೆ ಮೇರೆಗೆ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ರೂಪಿಸಿದ ಯೋಜನೆಗಳನ್ನು ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು. ಅಧ್ಯಕ್ಷತೆ ವಹಿಸಿದ್ದ ಮರಾಠ ಸಮಾಜ ಅಧ್ಯಕ್ಷ ಶೇಖಪ್ಪ ರಾಮಜಿ ಹಾಗೂ ಪುರಸಭೆ ಸದಸ್ಯ ಎಂ.ಎಸ್. ಹಡಪದ ಮಾತನಾಡಿದರು. ಇದೇ ಸಂದರ್ಭ ಸಮುದಾಯ ಭವನ ನಿರ್ಮಾಣಕ್ಕಾಗಿ ಸರ್ಕಾರದಿಂದ ಅನುದಾನ ಒದಗಿಸಲು ಶಾಸಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮರಾಠಾ ಸಮಾಜದಿಂದ ಪುರಸಭೆಗೆ ಆಯ್ಕೆಯಾದ ಪುರಸಭೆ ವಿಪಕ್ಷ ನಾಯಕ ಶಿವರಾಜ ಘೋರ್ಪಡೆ ಹಾಗೂ ವಾರ್ಡಿನ ಸದಸ್ಯ ಎಂ.ಎಸ್. ಹಡಪದ ಅವರನ್ನು ಸನ್ಮಾನಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎನ್. ಸೊನ್ನದ, ವೀರಣ್ಣ ಶೆಟ್ಟರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

