ಗದಗ

ಸಾರ್ವಜನಿಕರ ಬದುಕು ಸುಧಾರಣೆಗೆ ಬದ್ಧ: ಶಾಸಕ

Published On :

ಲಕ್ಷ್ಮೇಶ್ವರ: ಗ್ರಾಮಾಂತರ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಾಕಷ್ಟು ಅನುದಾನವನ್ನು ನೀಡುತ್ತಿದ್ದು, ಇಲ್ಲಿನ ರೈತರ ಹಾಗೂ ಸಾರ್ವಜನಿಕರ ಬದುಕು ಸುಧಾರಣೆ ಮಾಡುವಲ್ಲಿ ನಮ್ಮ ಸರ್ಕಾರದ ಗ್ರಾಮೀಣಾಭಿವೃದ್ದಿ ಸಚಿವರು ಪಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಶುಕ್ರವಾರ ಸಂಜೆ ಶೆಟ್ಟಿಕೇರಿ ಗ್ರಾಮದಲ್ಲಿ ಸುಮಾರು 2.5 ಕಿ.ಮೀ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮಗಳ ಅಭಿವೃದ್ಧಿಯಿಂದ ಸುಂದರ ರಾಜ್ಯ ಮತ್ತು ದೇಶವನ್ನು ನಿರ್ಮಾಣ ಮಾಡಲು ಸಾಧ್ಯ, ಅದಕ್ಕಾಗಿ ಗ್ರಾಮಾಂತರ ಪ್ರದೇಶಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನವನ್ನು ನೀಡುವ ಮೂಲಕ ರಸ್ತೆಗಳ ಅಭಿವೃದ್ಧಿ, ನಮ್ಮ ಹೊಲ ನಮ್ಮ ರಸ್ತೆ, ನಿರ್ಮಲ ಭಾರತ ಕನಸಿಗಾಗಿ ಪ್ರತಿಮನೆಗೂ ಶೌಚಾಲಯಗಳ ನಿರ್ಮಾಣ ಮಾಡುವ ಯೋಜನೆಯನ್ನು ನಮ್ಮ ಸರ್ಕಾರ ಹಾಕಿಕೊಂಡಿದೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ದೀಪಕ ಲಮಾಣಿ, ಗ್ರಾಪಂ ಅಧ್ಯಕ್ಷೆ ಫಕ್ಕಿರಮ್ಮ ಮಾಳಗಿಮನಿ, ಉಪಾಧ್ಯಕ್ಷ ನಾಗರಾಜ ಪಾಟೀಲ, ಲೊಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ವೈ.ಎಲ್. ಮಾಳೋದೆ, ಗ್ರಾಪಂ ಸದಸ್ಯ ಶಿವು ಲಮಾಣಿ, ಸಾವಕ್ಕ ಶಿಗ್ಲಿ, ಪರಸಪ್ಪ ಮುಳಗುಂದ, ಪರಮೇಶ ಹತ್ತಾಳ, ರಾಮಣ್ಣ ಬನ್ನಿಮಟ್ಟಿ, ಪರಸಪ್ಪ ಮುಳಗುಂದ, ಕಿರಣ ಲಮಾಣಿ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.