ಗದಗ

ಯೋಜನೆ ಸದುಪಯೋಗಪಡಿಸಿಕೊಳ್ಳಿ

Published On :

ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ನ. 24
ಸರ್ಕಾರ ಹಿಂದುಳಿದ ಹಾಗೂ ಸಾಮಾನ್ಯ ವರ್ಗದ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಎಲ್ಲರಿಗೂ ಉತ್ತಮ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಶಿಕ್ಷಣಕ್ಕಾಗಿ ಕೋಟ್ಯಂತರ ಹಣ ವ್ಯಯಿಸಿ ಊಟ ವಸತಿ, ಫೀ ರಿಯಾಯ್ತಿ, ಶಿಷ್ಯವೇತನದಂತಹ ಸಾಕಷ್ಟು ಸೌಲಭ್ಯಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವಂತೆ ಶಾಸಕ ರಾಮಕೃಷ್ಣ ದೊಡ್ಡಮನಿ ಕರೆ ನೀಡಿದರು.
ಈಚೆಗೆ ಪಟ್ಟಣದ ಸವಣೂರ ರಸ್ತೆಯಲ್ಲಿನ ಬಾಡಿಗೆ ಕಟ್ಟಡವೊಂದರಲ್ಲಿ ಸರ್ಕಾರದಿಂದ ಮಂಜೂರಾದ ಜಿಪಂ ವ್ಯಾಪ್ತಿಯ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರೆಕ್ ನಂತರದ ಬಾಲಕರ ವಸತಿ ನಿಲಯನ್ನು ಉದ್ಘಾಟಿಸಿ ಮಾತನಾಡಿದರು.
 ಮೇಲ್ವಿಚಾರಕರು ವಸತಿ ನಿಲಯಗಳಲ್ಲಿನ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಸೌಕರ್ಯಗಳನ್ನು ಒದಗಿಸಬೇಕು. ಸಿಬ್ಬಂದಿ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳೂ ಹೊಂದಿಕೊಂಡು ಹೋಗುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಎಂದರು.
ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷೆ ಗಂಗಮ್ಮ ಫಕ್ಕೀರಸ್ವಾಮಿಮಠ ಮಾತನಾಡಿದರು. ಪುರಸಭೆ ಸದಸ್ಯ ಜಯಕ್ಕ ಕಳ್ಳಿ, ಗಂಗಮ್ಮ ಗದ್ದಿ, ದಾದಾಪೀರ ಮುಚಾಲೆ, ಲೆಂಕೆಪ್ಪ ಶೆರಸೂರಿ, ನಾಗಪ್ಪ ವಡಕಣ್ಣವರ, ವೀರಣ್ಣ ಅಂಗಡಿ, ಎಸ್.ಪಿ. ಪಾಟೀಲ, ತಾಪಂ ಸದಸ್ಯ ಚನ್ನಪ್ಪ ಜಗಲಿ, ಪುರಸಭೆ ಉಪಾಧ್ಯಕ್ಷ ಎಂ.ಆರ್. ಪಾಟೀಲ, ಶರಣು ಗೋಡಿ, ವೆಂಕರಡ್ಡಿ ಮರಡ್ಡಿ, ವಿಜಯ ಕುಂಬಿ, ನೀಲಪ್ಪ ಶೆರಸೂರಿ, ಶೇಖಣ್ಣ ಕಾಳೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಶಾಂತ ವರದಪ್ಪನವರ, ಎಸ್.ಜಿ. ಹುಣಿಸ್ಯಾಳ, ಜೆ.ಎಂ. ಅಂಬಿಗೇರ, ಶಾಂತಾ ಕಟಗಿ ಮುಂತಾದವರು ಉಪಸ್ಥಿತರಿದ್ದರು. ನಿಲಯ ಮೇಲ್ವಿಚಾರಕ ಜಿ.ಎನ್. ಮಲ್ಲೂರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.