ಗದಗ

ವಿವಿಧ ಬೇಡಿಕೆಗಳ ಈಡೇರಿಕೆಗೆ ಶಿಕ್ಷಕರ ಆಗ್ರಹ: ಮನವಿ

Published On :

ರೋಣ: ಸರ್ಕಾರಿ ಶಾಲೆ ಮತ್ತು ಶಾಲಾ ಮಕ್ಕಳಿಗೆ ಸಿಗುವ ಸೌಲಭ್ಯಗಳು ಖಾಸಗಿ ಶಾಲಾ ಮಕ್ಕಳಿಗೆ ಸಿಗುವಂತಾಗಬೇಕು. ಖಾಲಿ ಇದ್ದ ಹುದ್ದೆ ಶೀಘ್ರ ನೇಮಕವಾಗಬೇಕು. ಪಿಂಚಣಿ ಯೋಜನೆ ವಿಸ್ತರಣೆಗೆ ಕ್ರಮ ಕೈಗೊಳ್ಳಬೇಕು. ಇನ್ನಿತರ ಹಲವಾರು ಬೇಡಿಕೆಗೆ ಆಗ್ರಹಿಸಿ ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ರೋಣ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಎ.ಬಿ. ಹೊನ್ನವಾಡ ಮಾತನಾಡಿ, ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ನಾನಾ ರೀತಿಯ ಒತ್ತಡ ಹೇರುತ್ತಿದೆಯೇ ಹೊರತು, ವಾಸ್ತವಿಕತೆಯನ್ನು ಅರಿತು ಸಮಸ್ಯೆಗೆ ಸ್ಪಂದಿಸುವ ದಿಸೆಯಲ್ಲಿ ಕಾರ್ಯ ಕೈಗೊಳ್ಳುತ್ತಿಲ್ಲ. ಕೇವಲ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಸರ್ಕಾರ ಶಿಕ್ಷಣ ಸಂಸ್ಥೆಗಳಿಗೆ ಹೇಳುತ್ತಿದೆ ವಿನಹಃ 2008 ರಿಂದ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಯನ್ನು ತುಂಬುವಲ್ಲಿ ಅನುಮತಿ ನೀಡುತ್ತಿಲ್ಲ. ಸರ್ಕಾರಿ ಶಾಲೆಯಲ್ಲಿ ಕಲಿಯುವ ಹೆಣ್ಣು ಮಕ್ಕಳಿಗೆ ಉಚಿತ ಪ್ರವೇಶ ವ್ಯವಸ್ಥೆ ಕಲ್ಪಿಸಿದೆ. ಅದನ್ನೇ ಖಾಸಗಿ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು.
ಎಸ್.ವೈ. ಅಬ್ಬಿಗೇರಿ ಮಾತನಾಡಿ, ಸರ್ಕಾರಿ ನೌಕರರಿಗೆ ಈಗಿನ 5 ಸ್ಥಗಿತ ವೇತನ ಬಡ್ತಿಗಳನ್ನು 8ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದ್ದು, ಅದನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೂ ವಿಸ್ತರಿಸಬೇಕು ಎಂದರು. ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರು ಮನವಿಯನ್ನು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಸಂಘದ ಪದಾಧಿಕಾರಿಗಳಾದ ಎಸ್.ಎಂ. ಮುದೋಳ, ಆರ್.ಎಚ್. ಖಾನಿಕರ, ಎಸ್.ಐ. ದಿಂಡೂರ, ಎಂ.ಎನ್. ಮರಡ್ಡಿ, ಎಂ.ಬಿ. ಕೊರ್ಲಹಳ್ಳಿ, ಎಚ್.ಎಚ್. ಕಡೇಮನಿ, ಸಿ.ಬಿ. ಮೇತ್ರಿ, ಎ.ಐ. ಶೇಖ, ಎಸ್.ಎಚ್. ಪಾಟೀಲ, ಎಂ.ಎಸ್. ಕಾಸೀಧ, ಬಿ.ಎನ್. ತಳವಾರ, ವಿ.ಎಸ್. ಮಲ್ಲಾಪುರ, ಎಸ್.ಜಿ. ಮಣ್ಣೂರ, ಪಿ.ಆರ್. ರಾಠೋಡ, ಎಚ್.ಆರ್. ಓಲೇಕಾರ, ಆರ್.ವಿ. ಗದಿಗೇರಿ, ಎಸ್.ವೈ. ಅಣ್ಣಿಗೇರಿ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.