ಗ್ರಾಮೀಣ ಸ್ತ್ರೀಯರು ಆರ್ಥಿಕ ಸಬಲರಾಗಿ
ಕನ್ನಡಪ್ರಭ ವಾರ್ತೆ, ನರಗುಂದ, ನ. 25
ಭಾರತ ಇತಿಹಾಸದಲ್ಲಿ ಮಹಿಳೆಗೆ ವಿಶೇಷ ಸ್ಥಾನಮಾನವಿದೆ. ಆದರೆ ಹಿಂದಿನ ಕಾಲದಲ್ಲಿ ಮಹಿಳೆಗೆ ಸ್ವಾವಲಂಬಿಯಾಗಿ ಬದುಕಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇಂದಿನ ಬದಲಾದ ಪರಿಸ್ಥಿತಿಯಲ್ಲಿ ಮಹಿಳೆಯು ಪುರುಷರಷ್ಟೇ ಸಮಾನಳಾಗಿದ್ದು, ಆರ್ಥಿಕವಾಗಿ ಸಬಲಳಾಗಬಹುದಾಗಿದೆ ಎಂದು ಚಿದಂಬರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಚಿದಂಬರ ನಿಂಬರಗಿ ಹೇಳಿದರು.
ಅವರು ತಾಲೂಕಿನ ಶಿರೋಳ ಗ್ರಾಮದಲ್ಲಿ ಸಮಾಜ ಕಲ್ಯಾಣ ಮಂಡಳಿ ನವದೆಹಲಿ, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಬೆಂಗಳೂರು, ಶಿವಚಿದಂಬರ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಈಚೆಗೆ ಬಡ ಗ್ರಾಮೀಣ ಮಹಿಳೆಯರಿಗೆ ಜಾಗೃತಿ ಶಿಬಿರದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ಬಡ ಹೆಣ್ಣು ಮಕ್ಕಳು ಆರ್ಥಿಕವಾಗಿ ಮುಂದೆ ಬರಲು ಪಣ ತೊಡಬೇಕಿದೆ. ಅವರು ಆರ್ಥಿಕ ಸಬಲರಾಗಲು ಸರ್ಕಾರವು ಹಲವು ಯೋಜನೆಗಳನ್ನು ರೂಪಿಸುತ್ತಿದ್ದು, ಸರ್ಕಾರದ ಯೋಜನೆಗಳನ್ನು ಮಹಿಳೆಯರು ಪಡೆದುಕೊಳ್ಳುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಕರೆ ನೀಡಿದರು.
ಡಾ. ವಿ.ಎಸ್. ಚವಡಿ, ಎಂ.ವಿ. ಬಾಗಿ, ಟಿ.ಬಿ. ಬಿಲ್ಲಾರ, ಎಸ್.ಜೆ. ಕರಮಡಿ, ಎಸ್.ಎಂ. ಕವಡಿಮಟ್ಟಿ, ಶಂಬಣ್ಣ ಕರ್ಕಿಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬಡ ಅಂಗವಿಕಲ ಮಕ್ಕಳಿಗೆ ಉಚಿತವಾಗಿ ನೋಟ್ಬುಕ್ ವಿತರಿಸಲಾಯಿತು.
ಸಿ.ಎಚ್. ಬನಪ್ಪಗೌಡ್ರ ನಿರೂಪಿಸಿದರು. ಡಿ.ಜಿ. ಮೇಗಲಮನಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

