ಗದಗ

ರಾಜಿ ಸಂಧಾನ ಯಶಸ್ವಿ

Published On :

ಗದಗ: ಗದಗ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಹಮ್ಮಿಕೊಂಡ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಷನಲ್ ಇನ್ಸೂರೆನ್ಸ್ ಕಂಪನಿಯ 2 ಪ್ರಕರಣ ಹಾಗೂ ಯುನೈಟೆಡ್ ಇನ್ಸೂರೆನ್ಸ್ ಕಂಪನಿಯ 11 ಪ್ರಕರಣಗಳು ಇತ್ಯರ್ಥಗೊಂಡು ಒಟ್ಟು ರು. 2219000ಗಳ ಪರಿಹಾರ ಹಣ ನೀಡಲ್ಪಟ್ಟಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಎಚ್. ಆವಿನ ಇವರ ಅಧ್ಯಕ್ಷತೆಯಲ್ಲಿ ರಾಜಿ ಸಂಧಾನ ನಡೆದಿದೆ. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ಕುಲಕರ್ಣಿ ಅಂಬಾದಾಸ್ ಜಿ, ಬಿ. ರವೀಂದ್ರನ್, ಯುನೈಟೆಡ್, ನ್ಯಾಷನಲ್ ಇನ್ಸೂರೆನ್ಸ್ ಕಂಪನಿಯ ಕಾನೂನು ಸಲಹೆಗಾರ ಡಿ.ಕೆ. ದೇಶಪಾಂಡೆ, ಯು.ಎಸ್. ಧರ್ಮಸಿ, ನ್ಯಾಯವಾದಿಗಳು ಪಾಲ್ಗೊಂಡು ಮೆಗಾ ಲೋಕ ಅದಾಲತ್ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸಿ ದರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.