ಸೇವೆ ಸದುಪಯೋಗ ಪಡೆಯಿರಿ
ಮುಂಡರಗಿ: ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಯೋಜನೆಯಡಿ ಹಲವಾರು ಆರೋಗ್ಯ ಸೇವೆಗಳು ದೊರೆಯುತ್ತಿದ್ದು, ಸಾರ್ವಜನಿಕರು ಸರ್ಕಾರಿ ಸೇವೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಈಚೆಗೆ ತಾಲೂಕಿನ ಹೆಸರೂರ ಗ್ರಾಮದಲ್ಲಿ ಜಿಪಂ ಗದಗ, ತಾಪಂ ಮುಂಡರಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗದಗ, ಗ್ರಾಪಂ ಹೆಸರೂರ, ಕರ್ನಾಟಕ ಆರೋಗ್ಯ ಪದ್ಧತಿ ಅಭಿವೃದ್ಧಿ ಮತ್ತು ಸುಧಾರಣೆ ಯೋಜನೆಯಡಿಯಲ್ಲಿ ರು. 19 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಗ್ರಾಮೀಣ ಭಾಗದ ಜನತೆಗೆ ಉತ್ತಮ ಸೇವೆಯನ್ನು ನೀಡುವ ಉದ್ದೇಶದಿಂದ ಇಲ್ಲಿನ ಉಪಕೇಂದ್ರವನ್ನು ನಿರ್ಮಾಣ ಮಾಡಿದ್ದು, ಸಾರ್ವಜನಿಕರು ಇಲ್ಲಿನ ವೈದ್ಯಾಧಿಕಾರಿಗಳೊಂದಿಗೆ ಸಹಕರಿಸಿಕೊಂಡು ಉತ್ತಮವಾದ ಸೇವೆ ಪಡೆದುಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಪ್ರತಿ ಗ್ರಾಮಗಳಿಗೆ ಕುಡಿಯುವ ನೀರು, ಆರೋಗ್ಯ ಮತ್ತು ವಿದ್ಯುತ್ ಸೌಲಭ್ಯವನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಡಿಎಚ್‌ಒ ಡಾ. ಡಿ.ಬಿ. ಚನ್ನಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಮಲ್ಲಪ್ಪ ಆರೇರ್, ಕರವೀರಯ್ಯ ಹಳ್ಳಿ, ಕೊಟ್ರಪ್ಪ ಹಳ್ಳಿಕೇರಿ, ಶಾಂತಲಿಂಗಯ್ಯ ಶಾಸ್ತ್ರಿಮಠ, ಮೌಲಾಸಾಬ ನದಾಫ್, ಕೊಟ್ರಪ್ಪ ಮೇಸ್ತ್ರಿ, ಮಂಜುನಾಥ ಹಳ್ಳಿ, ತಾಲೂಕು ಆರೋಗ್ಯಾಧಿಕಾರಿ ಡಾ. ಸುಭಾಸ ದೈಗೊಂಡ, ಆಡಳಿತ ವೈದ್ಯಾಧಿಕಾರಿ ಡಾ. ಪ್ರಕಾಶ ಹೊಸಮನಿ, ಶಂಕರ ಬಾವಿಮನಿ, ಕೆ.ವಿ. ಬಡಿಗೇರ, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

