ಉಪನ್ಯಾಸಕರ ಹುದ್ದೆ ನೇಮಕವಾಗಲಿ
ಗದಗ: ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ಶೀಘ್ರದಲ್ಲಿಯೇ ನೇಮಕ ಮಾಡಬೇಕು ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟ ಉತ್ತರ ಕರ್ನಾಟಕದ ಅಧ್ಯಕ್ಷ ಹನುಮಂತಗೌಡ ಕಲ್ಮನಿ ತಿಳಿಸಿದ್ದಾರೆ.
ಪ್ರಕಟಣೆ ನೀಡಿ, ಉನ್ನತ ಶಿಕ್ಷಣದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಉಚ್ಚ ಶಿಕ್ಷಣ ಅಭಿಯಾನ ಯೋಜನೆಯಡಿ ರಾಜ್ಯಕ್ಕೆ ರು. 10 ಸಾವಿರ ಕೋಟಿ ಅನುದಾನ ಲಭ್ಯವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಹೇಳಿರುವುದು ಸ್ವಾಗತಾರ್ಹ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಜಂಟಿ ಸಹಭಾಗಿತ್ವದ ಈ ಯೋಜನೆ ಕೇಂದ್ರ ಶೇ. 65 ಮತ್ತು ರಾಜ್ಯ ಸರ್ಕಾರ ಶೇ. 35 ರಷ್ಟು ವೆಚ್ಚ ಮಾಡಲಿವೆ. ಮತ್ತು 2022ರ ಅಂತ್ಯದೊಳಗೆ ರಾಜ್ಯಕ್ಕೆ ಒಟ್ಟು ರು. 10 ಸಾವಿರ ಕೋಟಿ ಅನುದಾನ ಲಭ್ಯವಾಗಲಿದೆ. ಉನ್ನತ ಶಿಕ್ಷಣ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ರು. 3300 ಕೋಟಿ ಅನುದಾನ ಹಂಚಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 10900 ಅತಿಥಿ ಉಪನ್ಯಾಸಕರಿದ್ದು, ಇವರ ಸೇವೆಯನ್ನು ಕಾಯಂಗೊಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿರುವುದು ಕೂಡ ವಯೋವುತಿ ಮೀರುತ್ತಿರುವ ಅತಿಥಿ ಉಪನ್ಯಾಸಕರ ಜೀವ ಹೋಗಿ ಬಂದಂತಾಗಿದೆ. ಆರ್.ವಿ. ದೇಶಪಾಂಡೆಯವರು ರಾಜ್ಯದಲ್ಲಿ 74 ಕಾಲೇಜುಗಳನ್ನು ಪ್ರಾರಂಭಿಸುತ್ತಿರುವುದು ಹೆಮ್ಮೆಯ ಸಂಗತಿ. ಆದರೆ, ಪ್ರಸ್ತುತ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರನ್ನು ಕಾಯಂ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

