ಕೆಜೆಪಿ ಕಾರ್ಯಕರ್ತರಿಂದ ಬಿಎಸ್‌ವೈಗೆ ಮನವಿ
ಲಕ್ಷ್ಮೇಶ್ವರ: ಬಿಟಿ ಹತ್ತಿ ಬೆಳೆ ನಾಶವಾದ ಹಿನ್ನೆಲೆಯಲ್ಲಿ ರೈತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರಕ್ಕೆ ಒತ್ತಾಯ ತರುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಿರಹಟ್ಟಿ ಮತಕ್ಷೇತ್ರದ ಕೆಜೆಪಿ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಮಹೇಶ ಹೊಗೆಸೊಪ್ಪಿನ ಮನವಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಮಹೇಶ ಹೊಗೆಸೊಪ್ಪಿನ ಮಾತನಾಡಿ, ಶಾದಿಭಾಗ್ಯವನ್ನು ಎಲ್ಲ ವರ್ಗದವರಿಗೆ ವಿಸ್ತರಿಸಬೇಕೆಂದು ಕಳೆದ ಹಲವು ದಿನಗಳಿಂದ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಧರಣಿ ನಡೆಸುತ್ತಿದ್ದು, ಅನೇಕ ಜನರು ಅವರಿಗೆ ಬೆಂಬಲ ಸೂಚಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಿರಹಟ್ಟಿ ಮತಕ್ಷೇತ್ರದ ಕೆಜೆಪಿ ಸರ್ವ ಕಾರ್ಯಕರ್ತರು ಬೆಂಬಲ ಸೂಚಿಸುತ್ತಿದ್ದೇವೆ.
ಶಿರಹಟ್ಟಿ ತಾಲೂಕಿನಲ್ಲಿ ರೈತ ಸಮುದಾಯದವರು ಬಿ.ಟಿ. ಕನಕ ಕಳಪೆ ಹತ್ತಿ ಬೀಜಗಳನ್ನು ಬಿತ್ತಿ ಬೆಳೆ ಬಾರದೆ ಕಂಗಾಲಾಗಿದ್ದು, ಈ ದಿಸೆಯಲ್ಲಿ ರಾಜ್ಯಾದ್ಯಂತ ಮಹಿಕೋ ಕಂಪನಿಯವರು ಕಳಪೆ ಬೀಜಗಳನ್ನು ಮಾರಾಟ ಮಾಡಿ ರೈತರನ್ನು ನಷ್ಟ ಅನುಭವಿಸುವಂತೆ ಮಾಡಿದ್ದಾರೆ. ಹತ್ತಿ ಬೆಳೆಯ ನಷ್ಟದ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ಮಾಹಿತಿ ಇದ್ದರೂ ಸರ್ಕಾರ ಕಂಪನಿಯ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿರುವುದಿಲ್ಲ. ಅದಕ್ಕಾಗಿ ರೈತರ ಧ್ವನಿಯಾಗಿರುವ ಯಡಿಯೂರಪ್ಪನವರು ರೈತರ ಬೆಂಬಲಕ್ಕೆ ನಿಂತು, ರೈತರಿಗೆ ನ್ಯಾಯ ದೊರಕುವಂತೆ ಮಾಡುವುದು ಅವಶ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಕೆಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

