ಗದಗ

ಎಂಇಎಸ್ ಶಾಸಕರ ಪ್ರತಿಕೃತಿ ದಹನ

Published On :

ಕನ್ನಡಪ್ರಭ ವಾರ್ತೆ, ಗದಗ, ನ. 26
ಎಂಇಎಸ್ ಶಾಸಕ ಸಂಭಾಜಿ ಪಾಟೀಲ ಬೆಳಗಾವಿಯ ಮಹಾಮೇಳಾವದಲ್ಲಿ ರಾಜ್ಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ, ಶಾಸಕರನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಪ್ರತಿಭಟನೆ ನಡೆಸಿತು.
ಮಂಗಳವಾರ ನಗರದ ಗಾಂಧಿ ವೃತ್ತಿದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು  ಎಂಇಎಸ್ ಶಾಸಕರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಹನುಮಂತಪ್ಪ ಅಬ್ಬಿಗೇರಿ ಮಾತನಾಡಿ, ಬೆಳಗಾವಿಯಲ್ಲಿ ನಡೆದ ಮಹಾಮೇಳಾವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಉದ್ರೇಕಕಾರಿ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಅವಹೇಳನಕ್ಕೆ ಕಾರಣವಾಗಿರುವ ಎಂಇಎಸ್ ಶಾಸಕರನ್ನು ಬಂಧಿಸಬೇಕು ಅಲ್ಲದೆ, ಅವರ ಶಾಸಕತ್ವವನ್ನು ರದ್ದುಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  
ಎಂಇಎಸ್ ಸಂಘಟನೆಯನ್ನು ನಿಷೇಧಿಸುವ ಮೂಲಕ ಗಡಿಪ್ರದೇಶದಲ್ಲಿ ನೆಮ್ಮದಿಯ ವಾತಾವರಣ ಕಲ್ಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕಿದೆ.
ಎಂಇಎಸ್ ಸಂಘಟನೆ ನಿರಂತರವಾಗಿ ಕನ್ನಡಿಗರ ಕುರಿತು ಅವಹೇಳನಕಾರಿ ಹೇಳಿಕೆ ನೀಡುತ್ತ ಕನ್ನಡಿಗರ ಸಹನೆಯನ್ನು ಕೆರಳಿಸುವ ಕಾರ್ಯದಲ್ಲಿ ತೊಡಗಿದೆ. ರಾಜ್ಯ ಸರ್ಕಾರ ಇಂತಹ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಗಾಂಧಿ ವೃತ್ತದಲ್ಲಿ ಎಂಇಎಸ್ ಪ್ರತಿಕೃತಿ ದಹಿಸಿ, ಕೆಲಕಾಲ ರಸ್ತೆತಡೆ ನಡೆಸಿ ಪ್ರತಿಭಟಿಸಲಾಯಿತು.
ಪ್ರತಿಭಟನೆಯಲ್ಲಿ ಸಿದ್ಧು ಅಂದಾನಗೌಡ್ರ, ಮುತ್ತು ಅನವಾಲದ, ಡಾ. ಜಯಕುಮಾರ ಬ್ಯಾಳಿ, ನಿಂಗನಗೌಡ ಪಾಟೀಲ, ನಿಂಗಪ್ಪ ಹೊನ್ನಾಪುರ, ಅಜೀಂ ಖಾಜಿ, ಮೌಲಾಸಾಬ ಕುಂದಗೋಳ, ರಮೇಶ ಕಾಟಿ, ಕಲ್ಮೇಶ ವಡ್ಡೀನ, ಗುರು ಮರಾಠಾ, ಹನುಮಂತ ಕಟ್ಟಿಮನಿ, ಮುತ್ತಪ್ಪ ಬಿಳೆಯಲಿ, ಪಠಾಣ, ಆರೀಫ, ಕಿರಣಕುಮಾರ ಮುತ್ತಾರ ಮುಂತಾದವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.