ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕಾಗಿ ಮನವಿ
ಗದಗ: ಮಾಜಿ ಶಿಕ್ಷಣ ಸಚಿವ, ವಿಪ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಶೈಕ್ಷಣಿಕ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟಕ್ಕೊಂದು ಹೊಸ ಆಯಾಮ 2013ರ ಅನ್ವಯ 2ನೇ ಹಂತದ ಹೋರಾಟ, ತಹಸೀಲ್ದಾರ್ ಮೂಲಕ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಿಗೆ ಈಚೆಗೆ ತಾಲೂಕು ಮಾಧ್ಯಮಿಕ ಶಾಲಾ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.ಅನುದಾನ ರಹಿತ ಸೇವಾವಧಿಯ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಾಲಾ ನೌಕರರಿಗೆ ನೀಡುವ ಬಗ್ಗೆ ನ್ಯಾಯಾಲಯದ ಆದೇಶವನ್ನು ಅನುಷ್ಠಾನಗೊಳಿಸುವುದು. 01-04-2006ರ ನಂತರ ನೇಮಕವಾದ ಹಾಗೂ ಅನುದಾನಕ್ಕೊಳಪಟ್ಟ ನೌಕರರಿಗೆ ಸರ್ಕಾರಿ ನೌಕರರಿಗೆ ಜಾರಿಗೊಳಿಸಿದ ಅಂಶದಾಯಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು. ವಂತಿಗೆಯನ್ನು ಸರ್ಕಾರವೇ ತುಂಬುವುದು. ವೃತ್ತಿ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವುದು. ಬೋಧಕೇತರ ಸಿಬ್ಬಂದಿಗಳ ನೇಮಕಾತಿಗೆ ಅನುಮತಿ ನೀಡುವುದು. ಹಾಗೂ ಈಗಾಗಲೇ ಕೆಲಸ ಮಾಡುತ್ತಿರುವವರನ್ನು ಕಾಯಂಗೊಳಿಸುವುದು. 2007ರ ವರ್ಗಾವಣೆ ನೀತಿಗೆ ತಿದ್ದುಪಡಿ ತರುವುದು. ಶಾಶ್ವತ ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಗೆ ಸೇವಾ ಭದ್ರತೆ ನೀಡುವ ಕಾನೂನನ್ನು ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಡಾ. ಬಸವರಾಜ ಧಾರವಾಡ, ಎಸ್.ಎಂ. ಕೊಟಗಿ, ಮಲ್ಲಿಕಾರ್ಜುನ ಚಿನ್ನೂರ, ಪಾಂಡಪ್ಪ ದಾಸರ, ಎನ್.ಎಸ್. ಬಟ್ಟೂರ, ಎ.ಎಸ್. ಪಾಟೀಲ, ಎಂ.ಪಿ. ಕ್ಯಾಮನಗೌಡರ, ಆರ್.ವಿ. ಗೊಂಡಬಾಳ, ಬಿ.ಕೆ. ಜಿನಗಿ. ಜೆ.ಸಿ. ನರೇಗಲ್ಲಮಠ, ಎಸ್.ಬಿ. ಕರ್ಜಗಿ, ಎಚ್.ಜಿ. ದೇಸಾಯಿ, ಪಿ.ಕೆ. ಕುಬೇರ, ಜಿ.ವಿ. ಕೌಜಲಗಿ, ಎಂ.ಡಿ. ವಡವಿ ಮುಂತಾದವರು ಉಪಸ್ಥಿತರಿದ್ದರು.
ಟ್ರ್ಯಾಕ್ಟರ್ ಪಲ್ಟಿ: ಚಾಲಕ ಸಾವು
ಗದಗ: ವೇಗವಾಗಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ನ ಚಾಲಕ ಸಾವನ್ನಪ್ಪಿರುವ ಘಟನೆ ತಾಲೂಕಿನ ನೀಲಗುಂದ-ಮಲ್ಲಿಗವಾಡ ರಸ್ತೆಯಲ್ಲಿ ಸಂಭವಿಸಿದೆ. ನೀಲಗುಂದ ಗ್ರಾಮದ ಹನುಮಂತಪ್ಪ ಸಿದ್ದಪ್ಪ ನಾಯ್ಕರ ಮೃತವ್ಯಕ್ತಿ ಎಂದು ಗುರುತಿಸಲಾಗಿದೆ. ಮಲ್ಲಿಗವಾಡ ರಸ್ತೆಯಲ್ಲಿರುವ ಹಳ್ಳಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರಾಯಿ ಮಾರಾಟ: ಇಬ್ಬರ ಬಂಧನ
ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಕಕ್ಕೂರ ಗ್ರಾಮದ ಬಸ್ನಿಲ್ದಾಣ ಹತ್ತಿರ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ನಿವಾಸಿ ಹನುಮಪ್ಪ ರಾಮಪ್ಪ ತಳವಾರ ಹಾಗೂ ಹನುಮಂತ ರಂಗಪ್ಪ ಮೇಟಿ ಬಂಧಿತರು. ಬಂಧಿತರಿಂದ ರು. 2415 ಮೌಲ್ಯದ ಸಾರಾಯಿ ಹಾಗೂ ರು. 500 ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

