ಇಂದು ಬಿಜೆಪಿ ಪ್ರತಿಭಟನೆ
ಗದಗ: ರಾಜ್ಯ ಸರ್ಕಾರದ ನಿರ್ಲಕ್ಷ್ಯ ನೀತಿಯ ಕಾರಣ ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಧರಣಿ ನಿರತ ಕಬ್ಬು ಬೆಳೆಗಾರ ರೈತ ವಿಠ್ಠಲ ಅರಭಾವಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟಣೆಗೆ ಕಾರಣವಾದ ಕಾಂಗ್ರೆಸ್ ದುರಾಡಳಿತ ಖಂಡಿಸಿ ಗದಗ ಜಿಲ್ಲಾ ಬಿಜೆಪಿಯಿಂದ ನ. 28ರ ಬೆಳಗ್ಗೆ 11ಕ್ಕೆ ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಗದಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಂ.ಎಂ. ಹಿರೇಮಠ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರತಿಭಟನೆಯ ನೇತೃತ್ವವನ್ನು ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ, ಮಾಜಿ ಸಚಿವ ಕಳಕಪ್ಪ ಬಂಡಿ, ಮಾಜಿ ಸಚಿವ ಸಿ.ಸಿ. ಪಾಟೀಲ, ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ, ರಾಮಣ್ಣ ಲಮಾಣಿ ವಹಿಸುವರು ಎಂ. ಎಸ್. ಕರಿಗೌಡ್ರ, ಕಾಂತಿಲಾಲ್ ಬನಸ್ಸಾಲಿ ಸೇರಿದಂತೆ ಬಿಜೆಪಿಯ ಹಲವಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಲಾಗಿದೆ.
ಇಂದಿನಿಂದ ಮಂಗಳೂರಿನಲ್ಲಿ ಚಿತ್ರಕಲಾ ಪ್ರದರ್ಶನ
ಗದಗ: ನಗರದ ವಿಜಯಕಲಾ ಮಂದಿರದ ಉಪನ್ಯಾಸಕ ಹಾಗೂ ಕಲಾವಿದ ಶರಣಪ್ಪ ಬಿ.ಎಚ್. ಇವರ ಇತ್ತೀಚಿನ ಕಲಾಕೃತಿಗಳ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವು ನ. 28 ರಿಂದ 30 ರವರೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಮಂಗಳೂರಿನ ಪ್ರಸಾದ ಆರ್ಟ್‌ಗ್ಯಾಲರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ನೆರವೇರಲಿದೆ. ಪ್ರದರ್ಶನವನ್ನು ತಿಲಕರಾಜ ಅತ್ತಾವರ ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

