ಯುವ ಮತದಾರರ ನೋಂದಣಿ
ಗದಗ: ಸಮಾಜದ ಅಭಿವೃದ್ಧಿಗೆ ಯುವಜನರು ಕೊಡುಗೆ ನೀಡುವ ನಿಟ್ಟಿನಲ್ಲಿ ದೇಶದ ಆಡಳಿತ ವ್ಯವಸ್ಥೆಗಾಗಿ ಜರುಗುವ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಬಹು ಮುಖ್ಯವಾಗಿದ್ದು, ಯುವಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವಂತೆ ಗದಗ ಉಪವಿಭಾಗಾಧಿಕಾರಿ ಐ.ಜಿ. ಗದ್ಯಾಳ ಮನವಿ ಮಾಡಿದರು.
ಬುಧವಾರ ನಗರದ ಗದಗ ನೆಹರು ಯುವ ಕೇಂದ್ರದ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವ ಮತದಾರರ ನೋಂದಣಿ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾರತ ಚುನಾವಣಾ ಆಯೋಗ ಜ. 1ರಂದು 18 ವರ್ಷ ತುಂಬುವ ಎಲ್ಲರಿಗೆ ಹಾಗೂ ಮತದಾರಪಟ್ಟಿಯಲ್ಲಿ ಹೆಸರು ಇರದ ಅರ್ಹ ಮತದಾರರಿಗೆ ಹೆಸರು ಸೇರ್ಪಡೆಗೆ ನ. 29ರ ವರೆಗೆ ಅವಕಾಶ ನೀಡಿದೆ. ಇದನ್ನು ಬಳಸಿಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿ ತಪ್ಪದೆ ಮತದಾನ ಮಾಡಬೇಕು. ಯುವಜನರು ಇದನ್ನು ಆಂದೋಲನದ ರೂಪದಲ್ಲಿ ಬೇರೆಯವರಿಗೂ ಪ್ರೇರೇಪಿಸಬೇಕು. ಈ ಕಾರ್ಯಕ್ಕಾಗಿ ಯುವಕರು ತಂಡಗಳ ರೂಪದಲ್ಲಿ ಕಾರ್ಯ ನಿರ್ವಹಿಸಿದಲ್ಲಿ ಅದು ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದರು.
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಎಸ್. ಶಂಕರ ಮಾತನಾಡಿ, ಯುವ ಜನರು ಮತದಾರ ನೋಂದಣಿ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮಗಳು ಸೇರಿದಂತೆ ಅಭಿವೃದ್ಧಿ ಪರ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ನೆಹರು ಯುವ ಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸದಸ್ಯೆ ಶೀಲಾ ಪಾಟೀಲ, ಮಂಜುಳಾ ಮೇಟಿ ಮುಂತಾದವರು ಉಪಸ್ಥಿತರಿದ್ದರು. ನೆಹರು ಯುವ ಕೇಂದ್ರದ ಅಧಿಕಾರಿ ಬಿ. ಗೋವಿಂದ ಭಟ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

