ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ
ಹೊಳೆಆಲೂರು: ಸಮೀಪದ ಬಿ.ಎಸ್. ಬೇಲೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್.ಎನ್. ಚೌಡಣ್ಣವರ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೆ. 29ರಂದು ಗದುಗಿನ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಕರವೇ ಜಿಲ್ಲಾ ಘಟಕದ ವತಿಯಿಂದ 2013-14ನೇ ಸಾಲಿನ ಶೈಕ್ಷಣಿಕ ವರ್ಷದ 8ನೇ ವರ್ಷದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಜಿಲ್ಲಾ ಉತ್ತಮ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಎಸ್.ಎನ್.ಚೌಡಣ್ಣವರ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದಾರೆ.
ಹಾಲು, ಹಣ್ಣು ವಿತರಣೆ
ಮುಂಡರಗಿ: ಪಟ್ಟಣದ ಯುವಸೇವಾ ಸಂಘಟನೆಯ ಗೆಳೆಯರು ಗಾಂಧಿ ಜಯಂತಿ ಅಂಗವಾಗಿ ಬುಧವಾರ ಬೆಳಗ್ಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ತೆರಳಿ ಅಲ್ಲಿನ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಗಾಂಧಿ ಜಯಂತಿಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ಪವನ್ ಚೋಪ್ರಾ, ವೈದ್ಯಾಧಿಕಾರಿ ಡಾ. ರವಿಶಂಕರ, ಡಾ. ಸುನಂದ, ಯುವಸೇವಾ ಸಂಘಟನೆಯ ಕಾರ್ಯದರ್ಶಿ ಮಂಜುನಾಥ ಗೋಡಿ, ವೀರೇಶ ಸಜ್ಜನರ, ಶ್ರೀನಿವಾಸ ದೊಡ್ಡಮನಿ, ಆಶಿಸ್ ಜೈನ್, ಫನಿರಾಜ್ ಅಳವಂಡಿ, ರವಿ ಕುಂಬಾರ, ಮುಧುಕೇಶ ಬೀಡನಾಳ, ರಾಘವೇಂದ್ರ ಹೆಗ್ಗಡಾಳ, ಕಮಲೇಶ ಜೈನ್, ಪ್ರಶಾಂತ ತಾವರಗೇರಿ, ಗಣೇಶ ಶಿದ್ಲಿಂಗ, ಬಾಲಾಜಿ ಕಾಲವಾಡ, ಕುಮಾರ ಬನ್ನಿಕೊಪ್ಪ, ನೀಲಪ್ಪ ಮಾನಶೆಟ್ಟಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

