ಗದಗ

ಖಾತ್ರಿ ಕಾಮಗಾರಿ ಗುಣಮಟ್ಟದಿರಲಿ

Published On :

ಕನ್ನಡಪ್ರಭ ವಾರ್ತೆ, ರೋಣ, ಅ. 4
ಖಾತ್ರಿ ಯೋಜನೆಯಲ್ಲಿ ಕೈಗೊಳ್ಳುವ ಕಾಮಗಾರಿಗಳು ಕಳಪೆಯಾಗದಂತೆ ಹಾಗೂ ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ಕಾರ್ಯನಿರ್ವಹಿಸುವಲ್ಲಿ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ ಎಂದು ಬಿಜೆಪಿ ಯುವ ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಹಾಗೂ ಗ್ರಾಪಂ ಉಪಾಧ್ಯಕ್ಷ ಬಸವಂತಪ್ಪ ತಳವಾರ ಹೇಳಿದರು.
ಬುಧವಾರ ತಾಲೂಕಿನ ಹುನಗುಂಡಿ ಗ್ರಾಪಂ ವ್ಯಾಪ್ತಿಯ ಹುನಗುಂಡಿ ಗ್ರಾಮದಲ್ಲಿ ಗ್ರಾಪಂ ಮತ್ತು ಗ್ರಾಮ ನೈರ್ಮಲ್ಯ ಸಮಿತಿ ಆಶ್ರಯದಲ್ಲಿ ಜರುಗಿದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅನುದಾನದಲ್ಲಿ ಕೈಗೊಳ್ಳಲಾದ ಕೆರೆ ಹೂಳೆತ್ತುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ದುಡಿಯುವ ಕೈಗಳಿಗೆ ಉದ್ಯೋಗ ಕಲ್ಪಿಸುವ ದಿಶೆಯಲ್ಲಿ ಜಾರಿಗೊಂಡ ರಾಷ್ಟ್ರೀಯ ಉದ್ಯೋಗ ಖಾತ್ರಿಯಲ್ಲಿ ಯೋಜನೆಯು ತಾಲೂಕಿನ ಅನೇಕ ಗ್ರಾಪಂನಲ್ಲಿ ಸದ್ಬಳಕೆಗಿಂತ ಹೆಚ್ಚಾಗಿ ದುರ್ಬಳಕೆಯಾಗುತ್ತಿದ್ದು ಕಂಡು ಬಂದಿದೆ. ಖಾತ್ರಿ ಯೋಜನೆಯ ರೈತ ಕೂಲಿ ಕಾರ್ಮಿಕರಿಗೆ ಕೂಲಿ ಹಣ ವಿತರಣೆಯಲ್ಲಿ ವಿಳಂಬವಾಗುತ್ತದೆ ಎಂದು ತಾಲೂಕಿನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ರೈತ ಕಾರ್ಮಿಕರ ಹಿತಾಸಕ್ತಿಯಲ್ಲಿ ಕಾಪಾಡಬೇಕು. ಖಾತ್ರಿ ಕಾಮಗಾರಿಯಲ್ಲಿ ಯಂತ್ರಗಳ ಬಳಕೆ ಕಡಿಮೆ ಮಾಡಿ ದುಡಿಯುವ ಕೈಗಳಿಗೆ ಸಮರ್ಪಕ ಉದ್ಯೋಗ ಹಾಗೂ ಕೂಲಿ ಹಣ ದೊರೆಯುವಂತಾಗಬೇಕು ಎಂದರು.
ಗ್ರಾಮ ಪಂಚಾಯಿತಿ ಪಿಡಿಒ ಮಂಜುನಾಥ ಗಣಿ, ಶಂಕರ, ಮಂಜು, ಆದಪ್ಪ, ಬಸವರಾಜ ಮುಂತಾದವರು ಉಪಸ್ಥಿತರಿದ್ದರು. ವೀರೇಶ ಮಣ್ಣೂರು ಸ್ವಾಗತಿಸಿ, ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.