ರಂಭಾಪುರಿ ಶ್ರೀಗಳ ಭವ್ಯ ಮೆರವಣಿಗೆ
ಜೇವರ್ಗಿ: ಜೇವರ್ಗಿ ಪಟ್ಟಣದಲ್ಲಿ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರರ ಭವ್ಯ ಮೆರವಣಿಗೆ ಶುಕ್ರವಾರ ಸಂಜೆ ಜರುಗಿತು. ಗಜರಾಜನಿಂದ ರಥೋತ್ಸವಕ್ಕೆ ಹೂಮಾಲೆ ಹಾಕುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ದಸರಾ ದರ್ಬಾರಕ್ಕೆ ಆಗಮಿಸಿದ ಜಗದ್ಗುರುಗಳನ್ನು ರಥದಲ್ಲಿ ಕೂಡಿಸಿ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು. ರಿಲಯನ್ಸ್ ಪೆಟ್ರೋಲ್ ಪಂಪ್ನಿಂದ ಬಸ್ ನಿಲ್ದಾಣ ಮೂಲಕ ವೇದಿಕೆವರೆಗೆ ನಡೆದ ಮೆರಣಿಗೆಯಲ್ಲಿ ಪುರವಂತರ ಸೇವೆ ಗಮನ ಸೆಳೆಯಿತು. ನಾಡಿನ ವಿವಿಧ ಮಠಾಧೀಶರು, ಅಪಾರ ಭಕ್ತರು, ಮುಖಂಡರು ಭಾಗವಹಿಸಿದ್ದರು.
ಭವ್ಯ ಸ್ವಾಗತ: ಶ್ರೀಗಳು ಆಗಮಿಸುವ ಮುಂಚೆ ಅಪಾರ ಭಕ್ತ ಸಮೂಹ ಜಮಾವಣೆಗೊಂಡು ಸ್ವಾಗತಕ್ಕೆ ಕಾದು ಕುಳಿತಿತ್ತು. ಜಗದ್ಗುರುಗಳು ಬರುತ್ತಿದ್ದಂತೆ ಭಕ್ತರು ಜಯಘೋಷಣೆ ಹಾಕಿ ಸಂಭ್ರಮಿಸಿದರು. ಅನೇಕ ಮುಖಂಡರು, ಸ್ವಾಗತ ಸಮಿತಿ ಮುಖಂಡರು ಜಗದ್ಗುರುಗಳನ್ನು ಭವ್ಯ ಸ್ವಾಗತಿಸಿದರು. ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು. ಶಖಾಪುರ ತಪೋವನ ಮಠದ ಸಿದ್ದರಾಮ ಶಿವಾಚಾರ್ಯರು, ಮಾಗಣಗೇರಿಯ ಡಾ. ವಿಶ್ವಾರಾಧ್ಯ ಶಿವಾಚಾರ್ಯರು, ಶ್ರೀನಿವಾಸ ಸರಡಗಿಯ ರೇವಣಸಿದ್ದೇಶ್ವರ ಶ್ರೀ, ಕಡಕೋಳ ಮಡಿವಾಳೇಶ್ವರ ಮಠದ ರುದ್ರಮುನಿ ಶಿವಾಚಾರ್ಯರು, ಹೊನ್ನಕಿರಣಗಿ ಚಂದ್ರಗುಂಡ ಶಿವಾಚಾರ್ಯರು, ಕಡಗಂಚಿ ಮಠದ ವೀರಭದ್ರ ಶಿವಾಚಾರ್ಯರು, ಮಳ್ಳಿ ಹಿರೇಮಠದ ರುದ್ರಮುನಿ ಸ್ವಾಮೀಜಿ, ಸೇರಿದಂತೆ ಅಪಾರ ಭಕ್ತರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

