ವಿದ್ಯಾಸಿರಿ ಯೋಜನೆ ಪಜಾ, ಪಪಂ ವಿದ್ಯಾರ್ಥಿಗಳಿಗೆ ವಿಸ್ತರಿಸಿ
ಗದಗ: ರಾಜ್ಯ ಸರ್ಕಾರದ ಯೋಜನೆಯಾದ ವಿದ್ಯಾಸಿರಿ ಯೂಜನೆಯನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿಸ್ತರಿಸುವಂತೆ ಆಗ್ರಹಿಸಿ ಈಚೆಗೆ ಗದಗ ಜಿಲ್ಲಾ ದಲಿತ ವಿದ್ಯಾರ್ಥಿ ಪರಿಷತ್‌ನ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಸತಿ ನಿಲಯಗಳ ಲಭ್ಯತೆ ವಿದ್ಯಾರ್ಥಿಗಳ ಪ್ರಮಾಣ ತಕ್ಕಂತೆ ವಸತಿ ನಿಲಯಗಳ ಸಾಕಾಗುತ್ತಿಲ್ಲ. ಈ ರೀತಿ ಅವಕಾಶ ವಂಚಿತರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿನೂತನ ವಿದ್ಯಾಸಿರಿ ಯೋಜನೆಯನ್ನು ಇದೇ ಮಂಗಳವಾರ ಜಾರಿಗೊಳಿಸಿದೆ. ವಿದ್ಯಾಸಿರಿ ಯೋಜನೆ ಅಡಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ತಿಂಗಳಿಗೆ ರು. 1,500 ನೀಡಲಾಗುತ್ತಿದ್ದು, ಈ ಯೋಜನೆಯನ್ನು ಪಜಾ, ಪಪಂ ವಿದ್ಯಾರ್ಥಿಗಳಿಗೆ ವಿಸ್ತರಿಸಬೇಕು. ಏಕೆಂದರೆ ಈ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ನಿರೀಕ್ಷೆಗೆ ತಕ್ಕತೆ ಎಲ್ಲ ವಿದ್ಯಾರ್ಥಿಗಳಿಗೆ ವಸತಿ ನಿಲಯದಲ್ಲಿ ಸ್ಥಳಾವಕಾಶ ಸಿಗುತ್ತಿಲ್ಲ. ಕಾರಣ ವಿದ್ಯಾಸಿರಿ ಯೋಜನೆಯನ್ನು ಪಜಾ, ಪಪಂ ವಿದ್ಯಾರ್ಥಿಗಳಿಗೆ ವಿಸ್ತರಿಸಬೇಕು ಎಂದು ಆಗ್ರಹಿಸಿ ತಹಸೀಲ್ದಾರ್ ಜಯಶ್ರೀ ಶಿಂತ್ರೆ ಅವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್‌ನ ಜಿಲ್ಲಾಧ್ಯಕ್ಷ ಪ್ರಕಾಶ ವೀರಾಪುರ ಹಾಗೂ ಪದಾಧಿಕಾರಿಗಳಾದ ವಸಂತ ಚವಡಣ್ಣವರ, ರಮೇಶ ಕಡೆಮನಿ, ಚಂದ್ರಶೇಖರ ಹರಿಜನ, ಸುರೇಶ ಚಲವಾದಿ, ಮುತ್ತು ಬಿಳೇಯಲಿ, ಮರಿಯಪ್ಪ ಹರಿಜನ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

