ಸಚಿವರಿಂದ ಪರಿಹಾರ ಚೆಕ್ ವಿತರಣೆ
ಗದಗ: ಸೆ. 29ರ ಬೆಳಗಿನ ಜಾವ ಮನೆಯೊಂದರ ಮೇಲ್ಛಾವಣಿ ಕುಸಿದ ಪರಿಣಾಮ ಮೂವರು ಮೃತಪಟ್ಟ ಘಟನೆ ನಗರದ ವೀರನಾರಾಯಣ ದೇವಸ್ಥಾನದ ಬಳಿ ಜರುಗಿತ್ತು. ಇದರಲ್ಲಿ ಮಹಾಂತೇಶ, ಮಾಲಾ ದಂಪತಿ ಸೇರಿದಂತೆ ಒಂದು ವರ್ಷದ ಮಗು ಭಾವನಾ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸ್ವಾಂತನ ಹೇಳಿದರು. ಪ್ರಕೃತಿ ವಿಕೋಪ ನಿಧಿಯಿಂದ ರು. 3 ಲಕ್ಷ ಹಾಗೂ ರಾಷ್ಟ್ರೀಯ ಕೌಟುಂಬಿಕ ನೆರವು ಯೋಜನೆಯಿಂದ ರು. 21 ಸಾವಿರದ ಚೆಕ್ನ್ನು ಮೃತ ಮಹಾಂತೇಶನ ತಂದೆ ನಿಂಗಪ್ಪ ಶಿವಮೂರ್ತೆಪ್ಪ ಕೆಂದೂರ ಅವರಿಗೆ ವಿತರಿಸಿದರು. ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ, ಘಟನೆ ಜರುಗಿದ ದಿನದಂದು ಈ ಭಾಗದ ಜನರು ಮಾನವೀಯತೆ ಮೆರೆದಿದ್ದು ಅಭಿನಂದನಾರ್ಹ. ಘಟನೆಯಲ್ಲಿ ಮೃತಪಟ್ಟ ಮಗುವಿಗೆ ಸಂಬಂಧಿಸಿದಂತೆ ಪರಿಹಾರ ವಿತರಣೆಯಲ್ಲಿ ಕೆಲವು ತಾಂತ್ರಿಕ ತೊಂದರೆಗಳಿರುವುದರಿಂದ ಮುಂಬರುವ ದಿನಗಳಲ್ಲಿ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು. ಮೃತರ ಕುಟುಂಬಕ್ಕೆ ಆಶ್ರಯ ಮನೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.
ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಆಸ್ಪತ್ರೆ ಹಾಗೂ 108 ಅಂಬ್ಯುಲೆನ್ಸ್ ವಾಹನದ ವಿಳಂಬ ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ತಮ್ಮ ಗಮನಕ್ಕೆ ಬಂದಿದ್ದು, ಈ ಕುರಿತು ಭಾನುವಾರ ರಾತ್ರಿ ಸಂಬಂಧಿಸಿದ ಅಧಿಕಾರಿಗಳ ಸಭೆ ಜರುಗಿಸಿ ಸಾರ್ವಜನಿಕರ ತೊಂದರೆಗಳನ್ನು ನಿವಾರಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎನ್.ಎಸ್.ಪ್ರಸನ್ನಕುಮಾರ, ಉಪವಿಭಾಗಾಧಿಕಾರಿ ಐ.ಜಿ. ಗದ್ಯಾಳ, ತಹಸೀಲ್ದಾರ್ ಜಯಶ್ರೀ ಶಿಂತ್ರೆ, ನಗರಸಭೆ ಸದಸ್ಯ ಅನಿಲ ಶಿಂಗ್ಟಾಲಕೇರಿ, ಎಂ.ಎಚ್. ಮುಳಗುಂದ, ಗುರಣ್ಣ ಬಳಗಾನೂರ, ಸಾಧಿಕ ನರಗುಂದ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

