ಗದಗ

ಸರ್ಕಾರದಿಂದ ಶಿಕ್ಷಣಕ್ಕೆ ಆದ್ಯತೆ: ದೊಡ್ಡಮನಿ

Published On :

ಕನ್ನಡಪ್ರಭ ವಾರ್ತೆ, ಮುಂಡರಗಿ, ಅ. 8ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ, ಉಚಿತ ಪಠ್ಯಪುಸ್ತಕ ವಿತರಣೆ, ನೂತನ ಕಟ್ಟಡಗಳು, ಅಡುಗೆ ಕೋಣೆ ಸೇರಿದಂತೆ ಪ್ರಸ್ತುತ ರಾಜ್ಯ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆ ಎಂದು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು. ತಾಲೂಕಿನ ನಾಗರಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಮಂಜೂರಾದ ನೂತನ ಕೊಠಡಿಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಸಾಕಷ್ಟು ನೂತನ ಕಟ್ಟಡಗಳು ಮಂಜೂರಾಗುತ್ತಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಗದಗ ಜಿಲ್ಲೆ ಉನ್ನತ ಸ್ಥಾನದಲ್ಲಿದೆ. ತಾಲೂಕಿನಲ್ಲಿಯೂ ಪ್ರತಿ 5 ಕಿ.ಮೀ.ಗೆ ಒಂದರಂತೆ ಪ್ರೌಢಶಾಲೆಗಳಿದ್ದು, ಮುಂಬರುವ ದಿನಗಳಲ್ಲಿ 7-8 ಕಿ.ಮೀ.ಗೆ ಒಂದರಂತೆ ಸರ್ಕಾರಿ ಪಪೂ ಕಾಲೇಜುಗಳನ್ನು ತೆರೆಯುವ ಯೋಜನೆ ಸರ್ಕಾರದ ಮುಂದಿದೆ. ಗುತ್ತಿಗೆದಾರರು ಗುಣಮಟ್ಟದ ಕೆಲಸ ಮಾಡುವಂತೆ ತಿಳಿಸಿದರು.ಹಮ್ಮಿಗಿ ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಮಾತನಾಡಿ, ಈ ಭಾಗದ ಎಲ್ಲ ಶಾಲಾ-ಕಾಲೇಜುಗಳಿಗೆ ಎಲ್ಲ ರೀತಿಯ ಮೂಲ ಸೌಲಭ್ಯ ಒದಗಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಈಶ್ವರಪ್ಪ ಹಂಚಿನಾಳ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ಮಾತನಾಡಿದರು. ಗ್ರಾಪಂ ಸದಸ್ಯ ಗುಡದಪ್ಪ ದೇಸಾಯಿ, ಹುಸೇನಸಾಬ ಹೊಸಮನಿ, ಹಲವಾಗಲಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಆರ್.ಬಿ. ಪೂಜಾರ ಸ್ವಾಗತಿಸಿದರು. ಶಿಕ್ಷಕ ಎಸ್.ಸಿ. ಹರ್ತಿ ನಿರೂಪಿಸಿದರು. ಕುಮಾರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.