ಗದಗ

ನಾಳೆ ಪ್ರಕಾಶ ಮೋಟರ್ಸ್ ಶೋ ರೂಂ ಉದ್ಘಾಟನೆ

Published On :

ಗದಗ: ನಗರದಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ಮಹೀಂದ್ರಾ ಕಂಪನಿಯ ಟ್ರ್ಯಾಕ್ಟರ್ ಶೋರೂಂನ ಪ್ರಕಾಶ ಮೋಟರ್ಸ್‌ನ ಉದ್ಘಾಟನಾ ಸಮಾರಂಭವನ್ನು ಅ. 14ರ ಬೆಳಗ್ಗೆ 10 ಗಂಟೆಗೆ ಎಂಪಿಎಂಸಿ ರಸ್ತೆಯಲ್ಲಿನ ಚವ್ಹಾಣ ಮಳಿಗೆಯಲ್ಲಿ ಹಮ್ಮಿಕೊಳ್ಳಲಾಗಿದೆ. ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಹಾಗೂ ಹೊಸಳ್ಳಿ ಬೂದೀಶ್ವರ ಸಂಸ್ಥಾನ ಮಠದ ಅಭಿನವ ಬೂದೀಶ್ವರ ಶ್ರೀಗಳು ಸಾನ್ನಿಧ್ಯ ವಹಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸುವರು. ಅತಿಥಿಗಳಾಗಿ ಶಾಸಕ ಜಿ.ಎಸ್. ಪಾಟೀಲ, ಬಿ.ಆರ್. ಯಾವಗಲ್, ರಾಮಕೃಷ್ಣ ದೊಡ್ಡಮನಿ, ಮಾಜಿ ಶಾಸಕ ಡಿ.ಆರ್. ಪಾಟೀಲ, ಕೆಪಿಪಿಸಿ ಸದಸ್ಯ ವಾಸಣ್ಣ ಕುರಡಗಿ, ಜಿಪಂ ಸದಸ್ಯ ಆರ್.ಡಿ. ಕೊಂಡಿಕೊಪ್ಪ, ಈಶ್ವರಪ್ಪ ಗೂಳಗಣ್ಣವರ, ಎಸ್.ಎನ್. ಶಿಂಧೆ, ಫಕ್ಕೀರಪ್ಪ ಹೆಬಸೂರ, ಎಸ್.ಎಚ್.ಪಾಟೀಲ, ಕೆ.ಎಸ್. ಚಟ್ಟಿ, ಡಿ.ಎಫ್. ಸಾಶ್ವಿಹಳ್ಳಿ, ಬಿ.ಎಫ್. ಕಂಬಳಿ ಮುಂತಾದವರು ಆಗಮಿಸುವರು ಎಂದು ಪ್ರಕಾಶ ಮೋಟರ್ಸ್‌ನ ಪ್ರಕಾಶ ಕರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.