ಬಿಸಿಎಂ ಹಾಸ್ಟೆಲ್ ಕಟ್ಟಡ ಶೀಘ್ರ ಪ್ರಾರಂಭ
ರೋಣ: ರೋಣ ಪಟ್ಟಣಕ್ಕೆ ಮಂಜೂರಾದ ಬಿಸಿಎಂ ಹಾಸ್ಟೆಲ್ ಪ್ರಾರಂಭಿಸಲು ಕಟ್ಟಡಗಳು ಸಿಗದೇ ಇರುವುದರಿಂದ ತಡವಾಗಿದೆ ಹೊರತು ನಿಷ್ಕಾಳಜಿ ಮಾಡಿಲ್ಲ. ಸದ್ಯ ಖಾಸಗಿ ಕಟ್ಟಡದಲ್ಲಿ ಹಾಸ್ಟೆಲ್ ಪ್ರಾರಂಭಿಸಲಾಗುವುದು. ಕಟ್ಟಣಡ ನಿರ್ಮಾಣಕ್ಕೆ ಭೂಮಿ ದೊರೆತಲ್ಲಿ ಶೀಘ್ರ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು. ಅವರು ಈಚೆಗೆ ಸಂಜೆ ಪಟ್ಟಣದ ಆಶಾಕಿರಣ ಕೋಚಿಂಗ್ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಬಿಸಿಎಂ ಇಲಾಖೆ ಆಶ್ರಯದಲ್ಲಿ ಜರುಗಿದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಪ್ರಾರಂಭೋತ್ಸವ ಸಮಾರಂಭದಲ್ಲಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು. ರೋಣದ ಗುಲಗಂಜಿ ಮಠದ ಗುರಪಾದ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಬಿಸಿಎಂ ಜಿಲ್ಲಾ ಅಧಿಕಾರಿ ಖಾಜಾಹುಸೇನ ಮುದೋಳ, ಪುರಸಭೆ ಅಧ್ಯಕ್ಷ ಮುತ್ತಣ್ಣ ಸಂಗಳದ, ಹಾವೇರಿ ಲೋಕಸಭೆಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮಿಥುನ್ ಪಾಟೀಲ, ದಶರಥ ಗಾಣಿಗೇರ, ಪುರಸಭೆ ಸದಸ್ಯ ತೋಟಪ್ಪ ನವಲಗುಂದ, ತಾಲೂಕು ಬಿಸಿಎಂ ಅಧಿಕಾರಿ ಎಸ್.ಎಸ್. ಈಟೇಕಾರ, ಬಸವರಾಜ ನವಲಗುಂದ, ವಿ.ಬಿ. ಸೋಮನಕಟ್ಟಿಮಠ ಮುಂತಾದವರು ಉಪಸ್ಥಿತರಿದ್ದರು. ಜಗದೀಶ ಹಿರೇಮಠ ನಿರೂಪಿಸಿದರು. ಪರಡ್ಡಿ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

