ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹೊಂದುವುದು ಅವಶ್ಯ
ನರೇಗಲ್ಲ: ವಿದ್ಯಾರ್ಥಿಗಳು ಓದಿನೊಂದಿಗೆ ಉತ್ತಮ ಆರೋಗ್ಯದತ್ತ ಗಮನಹರಿಸುವ ಅಗತ್ಯವಿದೆ ಎಂದು ಡಾ. ಕೆ.ಬಿ. ಧನ್ನೂರ ಹೇಳಿದರು. ಅವರು ಸಮೀಪದ ತೋಟಗಂಟಿ ಗ್ರಾಮದಲ್ಲಿ ಸ್ಥಳೀಯ ಅನ್ನದಾನೇಶ್ವರ ಪಪೂ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ವತಿಯಿಂದ ಈಚೆಗೆ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.
ಪರಿಸರಕ್ಕೆ ಹಾನಿಯನ್ನುಂಟುಮಾಡುವ ಪ್ಲಾಸ್ಟಿಕ್ ಘನ ತ್ಯಾಜ್ಯ ಬಳಸುವುದನ್ನು ಕಡಿಮೆ ಮಾಡಬೇಕು. ಇಲ್ಲವಾದರೆ ಮಾನವನಿಗೆ ಆಹಾರದ ಮೂಲವಾದ ಭೂಮಿ ಬರಡುತನವನ್ನು ಎದುರಿಸಬೇಕಾಗುತ್ತದೆ. ರೈತರು ಜಮೀನುಗಳಿಗೆ ರಾಸಾಯನಿಕ ಗೊಬ್ಬರ ಬಳಸದೇ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳುವುದು ಉತ್ತಮ ಕ್ರಮವಾಗಿದೆ. ಪರಿಸರ ಕಾಳಜಿಯನ್ನು ಪ್ರತಿಯೂಬ್ಬರು ಬೆಳೆಸಿಕೊಳ್ಳುವ ಅವಶ್ಯಕತೆಯಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಿತ ಚಿಕಿತ್ಸಾ ಪದ್ಧತಿಗಳಿದ್ದು, ಇವುಗಳ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿದರು.
ರೋಣ ಪಿಎಲ್ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ಎ.ಆರ್. ಮಲ್ಲನಗೌಡ್ರ ಮಾತನಾಡಿ, ಎನ್.ಎಸ್.ಎಸ್. ಗಾಂಧೀಜಿಯವರ ಗ್ರಾಮಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಉದ್ದೇಶ ಹೊಂದಿದೆ. ಗ್ರಾಮದ ಉದ್ಧಾರದಲ್ಲಿ ದೇಶದ ಉದ್ಧಾರ ಅಡಗಿದೆ. ವಿದ್ಯಾರ್ಥಿಗಳು ಸಮಾಜಸೇವೆ ಮಾಡುವ ಸಂಕಲ್ಪ ಮಾಡಬೇಕೆಂದರು. ಆರ್.ಜಿ. ಪಾಟೀಲ, ಡಿ.ಎ. ಹೊನ್ನಪ್ಪಗೌಡ, ಆರ್.ಕೆ. ಮಲ್ಲನಗೌಡ್ರ, ಎಂ.ಬಿ. ತೇಜಪ್ಪನವರ, ಎನ್.ಎಚ್. ಹುಯಿಲಗೋಳ, ಬೈಲಪ್ಪ ಕುರಿ, ವಿ.ಜಿ. ಮಳ್ಳಿ, ಶಿವಾನಂದ ಗೂಗೇರಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪಿ.ವೈ. ಕರಮುಡಿ, ಉಪನ್ಯಾಸಕ ಆರ್.ಎಸ್. ಉಪ್ಪಲದಿನ್ನಿ ಮುಂತಾದವರು ಉಪಸ್ಥಿತರಿದ್ದರು. ಎಂ.ಬಿ. ಕೊರಣ್ಣವರ ಸ್ವಾಗತಿಸಿದರು. ರಮೇಶ ಬೇವೂರ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

