ಸುದ್ದಿ ಸಂಕ್ಷೇಪ
21ರಂದು ಪುಸ್ತಕನಿಷೇಧಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಗದಗ: ಬಸವಣ್ಣನವರ ಕುರಿತು ಅವಹೇಳನಕಾರಿಯಾಗಿ ಪ್ರಕಟಿಸಿರುವ ಸಿದ್ದರಾಮೇಶ್ವರ ಚರಿತ್ರೆ ಪುಸ್ತಕವನ್ನು ನಿಷೇಧಿಸುವಂತೆ ಹಾಗೂ ಲೇಖಕರ ಮೇಲೆ ಕ್ರಮಕ್ಕೆ ಆಗ್ರಹಿಸಿ ಅ. 21ರಂದು ನಗರದಲ್ಲಿ ಜ. ತೋಂಟದ ಡಾ. ಸಿದ್ಧಲಿಂಗ ಶ್ರೀಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಡಾ. ಜಿ.ಬಿ. ಪಾಟೀಲ ಹೇಳಿದರು. ಅವರು ಶನಿವಾರ ನಗರದ ಜ. ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಕೇಂದ್ರದಲ್ಲಿ ಜರುಗಿದ ಬಸವಾಭಿಮಾನಿಗಳ ಸಭೆಯಲ್ಲಿ ಮಾತನಾಡಿದರು. ಪುಸ್ತಕದಲ್ಲಿ ಬಸವಣ್ಣ, ಅಲ್ಲಮಪ್ರಭು ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನಕಾರಿಯಾಗಿ ಬರೆಯುವ ಮೂಲಕ ಸಮಸ್ತ ಬಸವಾಭಿಮಾನಿಗಳಿಗೆ ನೋವುಂಟು ಮಾಡಿರುವ ಈ ಕೃತಿಯನ್ನು ತಕ್ಷಣ ನಿಷೇಧಿಸಬೇಕಿದೆ. ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆಯುತ್ತಿದ್ದು, ಈ ರೀತಿಯ ಘಟನೆಗಳು ಮರುಕಳಿಸದಂತೆ ಸರ್ಕಾರ ಉಗ್ರ ಕ್ರಮ ಕೈಗೊಳ್ಳುವ ನಿರ್ಧಾರ ಪ್ರಕಿಟಿಸಬೇಕಿದೆ. ವಿಶ್ವಕ್ಕೆ ವಚನಗಳ ಮೂಲಕ ಸಂದೇಶ ನೀಡಿ ಜನಸಮಾನ್ಯನ ಬದುಕಿನಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವಲ್ಲಿ ಶ್ರಮಿಸಿದ ವಿಶ್ವಮಾನವ ಬಸವೇಶ್ವರರ ಕುರಿತು ಅವಹೇಳನಕಾರಿಯಾಗಿ ಪ್ರಕಟಿಸುವ ಮೂಲಕ ಸಮಸ್ತ ಬಸವಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿರುವ ಕೃತಿಯನ್ನು ಶೀಘ್ರ ರದ್ದುಗೊಳಿಸಬೇಕಿದೆ. ಈ ಹಿನ್ನಲೆಯಲ್ಲಿ ನಗರದ ಬಸವಾಭಿಮಾನಿಗಳ ಸಮ್ಮುಖದಲ್ಲಿ ಅ. 21 ರಂದು ಬೆಳಗ್ಗೆ 9 ಗಂಟೆಗೆ ಜ. ತೋಂಟದಾರ್ಯ ಮಠದಿಂದ ಜ. ತೋಂಟದ ಡಾ. ಸಿದ್ಧಲಿಂಗ ಶ್ರೀಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದರು. ಸಭೆಯಲ್ಲಿ ಪ್ರೊ. ಕೆ.ಎಚ್. ಬೇಲೂರ, ಎಸ್.ಟಿ. ಮೇಲಗಿರಿ, ಸಿರಾಜ ಬಳ್ಳಾರಿ, ವಿಜಯ ಮುಳಗುಂದ, ಶಿವಣ್ಣ ಮುಳಗುಂದ, ಬಿ.ಬಿ. ಅಸೂಟಿ, ವೆಂಕಟೇಶ ಕಟ್ಟಿಮನಿ, ಫಕೀರಪ್ಪ ಹೆಬಸೂರ, ಸತೀಶ ಹೂಲಿ, ಮೋಹನ ಅಲ್ಮೇಕರ, ಎಸ್.ಎನ್. ಬಳ್ಳಾರಿ, ರಾಮಣ್ಣ ಫಲದೊಡ್ಡಿ, ಪ್ರಕಾಶ ಕರಿಸೋಮನಗೌಡ್ರ, ಶೇಖರ ಕವಳಿಕಾಯಿ, ಎಂ.ಐ. ಶೇಖ, ಸದಾನಂದ ಪಿಳ್ಳಿ, ಎಸ್.ಎಸ್. ಪಟ್ಟಣಶೆಟ್ಟಿ, ಎಂ.ಎ. ಹಂಚಿನಾಳ, ಎಂ.ಎಸ್. ಪಾಟೀಲ, ಮೃತ್ಯುಂಜಯ ಸಂಕೇಶ್ವರ ಮುಂತಾದವರು ಪಾಲ್ಗೊಂಡಿದ್ದರು.
ಸಹಕಾರಿ ಸಂಘಕ್ಕೆ ಆಯ್ಕೆ
ಶಿರಹಟ್ಟಿ: ತಾಲೂಕಿನ ಮಜ್ಜೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ದೇವಪ್ಪ ಚಂದ್ರಪ್ಪ ದುಗ್ಗಾಣಿ ಹಾಗೂ ಉಪಾಧ್ಯಕ್ಷರಾಗಿ ಜಂದಿಸಾಬ ಚ. ಅಣ್ಣಿಗೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಕಟಣೆ ತಿಳಿಸಿದೆ.
ಯುವಕ ಆತ್ಮಹತ್ಯೆ
ಶಿರಹಟ್ಟಿ: ಯುವಕನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಪಟ್ಟಣದ ಸೋಮಣ್ಣ ದೇವಪ್ಪ ಘಂಟಿ (28) ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

