ಗದಗ

ಸುದ್ದಿ ಸಂಕ್ಷೇಪ

Published On :

ಪ್ರೀತಿ ವಿಶ್ವಾಸ ಗಳಿಸಿದ ಅಂಚೆ ಸೇವೆ: ಶಿರೂರ
ಗದಗ: ಭಾರತ ಸರ್ಕಾರದ ಅಂಚೆ ಸೇವೆ ವಿಶ್ವದಾದ್ಯಂತ ಜನರ ಪ್ರೀತಿ, ವಿಶ್ವಾಸಕ್ಕೆ ಪಾತ್ರವಾಗಿದೆ ಎಂದು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ರಾಜಶೇಖರ ಶಿರೂರ ಹೇಳಿದರು. ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ನಗರದ ಹೆಡ್ ಪೋಸ್ಟ್ನಲ್ಲಿ ಇತ್ತೀಚಿಗೆ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದರು. ಅಂಚೆ ಸೇವೆ ಪ್ರಮುಖ ಪಾತ್ರ ನಿರ್ವಹಿಸುವುದರ ಜತೆಗೆ ಪೋಸ್ಟ್ಮನ್ಗಳ ಪಾತ್ರ ಮಹತ್ವದಾಗಿದೆ. ಅವರ ಶ್ರಮ ಹಾಗೂ ಬಂದ ಪತ್ರಗಳನ್ನು ಸರಿಯಾಗಿ ತಲುಪಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಪೋಸ್ಟ್ ಸೂಪರಿಂಟೆಂಡೆಂಟ್ ಮಧು ಬಾವಿ ಅಧ್ಯಕ್ಷತೆ ವಹಿಸಿ ಮಾತನಾಡಿ, 150 ವರ್ಷ ಇತಿಹಾಸ ಹೊಂದಿರುವ ಪೋಸ್ಟ್ ವಿಶ್ವದಾದ್ಯಂತ ಸೇವೆಯನ್ನು ಕೈಗೊಳ್ಳುತ್ತಿದೆ. ಈ ಹಿಂದಿನ ಕಾಲದಲ್ಲಿ ಹಳ್ಳಿಗಳಲ್ಲಿ ಜನರು ಪೋಸ್ಟ್ಮನ್ ಬಂದರೆ ಅವನು ಯಾವ ಸಂದೇಶ ತರುತ್ತಿದ್ದಾನೆಂದು ಕಾತುರದಿಂದ ಕಾಯುತ್ತಿದ್ದರು. ಇಂತಹ ಇತಿಹಾಸವನ್ನು ಹೊಂದಿರುವ ಪೋಸ್ಟ್ ಇಂದೂ ಸಾಕಷ್ಟು ಬದಲಾವಣೆಯೊಂದಿಗೆ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು. ಸಭೆಯಲ್ಲಿ ವಿವಿಧ ಬ್ಯಾಂಕಿನ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಅರ್ಜಿ ಆಹ್ವಾನ
ಗದಗ:  ಕೆನರಾ ಬ್ಯಾಂಕ್ ಮತ್ತು ವಿ.ಆರ್.ಡಿ.ಎಂ. ಟ್ರಸ್ಟ್ನಿಂದ ಪ್ರಾಯೋಜಿತ ದೇಶಪಾಂಡೆ ರುಡ್ಸೆಟ್ ಹಳಿಯಾಳ  ಇವರು ನ. 7ರಿಂದ 30 ದಿನಗಳ ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ತರಬೇತಿ ಮತ್ತು ಪುರುಷರಿಗಾಗಿ ನ. 11ರಿಂದ 30 ದಿನಗಳ ದ್ವಿಚಕ್ರ ವಾಹನ ರಿಪೇರಿ ತರಬೇತಿ ಹಾಗೂ ನ. 18ರಿಂದ 30 ದಿನಗಳ ಕಂಪ್ಯೂಟರ್ ಡಿಟಿಪಿ ತರಬೇತಿಗಳನ್ನು ಆಯೋಜಿಸಲಾಗಿದೆ. ತರಬೇತಿಯು ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. 18 ರಿಂದ 45 ವರ್ಷದೊಳಗಿನ ರಾಜ್ಯದ ಯಾವುದೇ ಭಾಗದ ಆಸಕ್ತರು ತರಬೇತಿಯಲ್ಲಿ ಭಾಗವಹಿಸಬಹುದು. ಅರ್ಜಿ ಸಲ್ಲಿಸಲು ಇಚ್ಛಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ, ಪಡೆಯಲಿಚ್ಛಿಸುವ ತರಬೇತಿ, ವಿದ್ಯಾರ್ಹತೆ, ಆಯ್ದ ವಿಷಯದಲ್ಲಿ ಪ್ರಾಥಮಿಕ ಜ್ಞಾನ, ಅನುಭವ ಮುಂತಾದ ವಿವರಗಳನ್ನೊಳಗೊಂಡ ಅರ್ಜಿಯನ್ನು ನಿರ್ದೇಶಕರು, ದೇಶಪಾಂಡೆ ರುಡ್ಸೆಟ್ ಸಂಸ್ಥೆ, ಉದ್ಯೋಗ ವಿದ್ಯಾನಗರ, ಹಳಿಯಾಳ-581329 ಇವರಿಗೆ ಶಿಬಿರಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08284-220807, 9482188780, 9483485489 ಇಲ್ಲಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಮಹಾದೇವಪ್ಪ ಡೊಳ್ಳಿನ ನಿಧನ
ಗಜೇಂದ್ರಗಡ:  ಪಟ್ಟಣದ ಡೊಳ್ಳಿನವರ ಓಣಿಯ ನಿವಾಸಿ ನಿವೃತ್ತ ಶಿಕ್ಷಕ ಮಹಾದೇವಪ್ಪ ಶಂಕ್ರಪ್ಪ ಡೊಳ್ಳಿನ (78) ಭಾನುವಾರ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗ ಇದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.