ಕೆರೆಯಲ್ಲಿ ಮುಳುಗಿ ಬಾಲಕ ಸಾವು
ಗಜೇಂದ್ರಗಡ: ಪಟ್ಟಣದ ಗುಡ್ಡದ ಬಳಿ ನಿರ್ಮಿಸಿರುವ ನೂತನ ಕೆರೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿ ನೀರಿನಾಳಕ್ಕೆ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.
ಈಚೆಗೆ ಸುರಿದ ಮಳೆಯಿಂದಾಗಿ ಕೆರೆಯಲ್ಲಿ ನೀರು ತುಂಬಿದ ಪರಿಣಾಮ ಕೆರೆಯಲ್ಲಿ ಈಜಲು ತನ್ನ ಸ್ನೇಹಿತರೊಂದಿಗೆ ಬೆಳಗ್ಗೆ ಹೋದ ಶಿವಪ್ರಸಾದ ಮೆಣಸಿನಕಾಯಿ (13) ಎಂದು ಗುರುತಿಸಲಾಗಿದೆ. ಬಹಳ ಹೊತ್ತಿನವರೆಗೂ ಮನೆಗೆ ಬಾರದಿರುವ ಬಗ್ಗೆ ಪೋಷಕರಲ್ಲಿ ಆತಂಕ ಮೂಡಿತ್ತು. ಅಕ್ಕ ಪಕ್ಕದವರನ್ನು ವಿಚಾರಿಸಿದಾಗ ಕೆರೆಯಲ್ಲಿ ಈಜಲು ತೆರಳಿದ ಬಗ್ಗೆ ಮಾಹಿತಿ ದೊರೆತ ತಕ್ಷಣವೇ ಪೋಷಕರು ಕೆರೆಯತ್ತ ಧಾವಿಸಿದರು.
ಅಷ್ಟೊತ್ತಿಗಾಗಲೇ ಕೆಲವರು ಕೆರೆಯಲ್ಲಿ ಶವ ಶೋಧನೆಗೆ ಮುಂದಾಗಿದ್ದರು. ಸತತ 2 ಗಂಟೆಗೂ ಹೆಚ್ಚುಕಾಲ ಶವಕ್ಕಾಗಿ ಶೋಧ ನಡೆಸಿದ ಬಳಿಕ ಬಾಲಕನ ಶವ ದೊರೆಯಿತು. ಈ ಕುರಿತು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಸಿನೀರು ಬಿದ್ದು ಮಗು ಸಾವು
ಗದಗ: ಒಂದು ವರ್ಷದ ಮಗು ಅಡುಗೆ ಮನೆಯಲ್ಲಿ ಒಲೆಯ ಮೇಲೆ ಕಾಯಿಸಲು ಇಟ್ಟಿದ್ದ ಬಿಸಿ ನೀರು ಇದ್ದ ಡಬರಿ ಜಗ್ಗಿದ ಪರಿಣಾಮ ಬಿಸಿ ನೀರು ಮಗುವಿನ ಮೇಲೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಶಿರುಂದ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಾರ್ತಿಕ ಮಲ್ಲೇಶಪ್ಪ ಬಂಡಿವಡ್ಡರ ಮೃತ ಮಗುವಾಗಿದ್ದು, ತೀವ್ರ ಗಾಯಗೊಂಡಿದ್ದ ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

